ಬಸ್ ಚಾಲನೆ ಮಾಡುವಾಗಲೇ ಹೃದಯಾಘಾತದಿಂದ ಚಾಲಕ ಸಾವು; ಕಂಡಕ್ಟರ್ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಬಸ್ ಚಾಲನೆ ಮಾಡುವಾಗಲೇ ಹೃದಯಾಘಾತದಿಂದ ಚಾಲಕ ಸಾವನ್ನಪ್ಪಿದ್ದು, ಈ ವೇಳೆ ನಿಯಂತ್ರಣ ತಪ್ಪಿದ ಬಸ್ ಪೆಟ್ರೋಲ್ ಬಂಕ್ ಗೆ ನುಗ್ಗಿದೆ. ಆದರೆ ಕೂಡಲೇ ಸಮಯ ಪ್ರಜ್ಞೆ ಮೆರೆದ ಕಂಡಕ್ಟರ್ ಬ್ರೇಕ್ ಹಾಕಿ ಬಸ್ ನಿಲ್ಲಿಸುವ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ಇಂತಹದೊಂದು ಘಟನೆ ಮಂಗಳವಾರ ಸಂಜೆ ಸಿಂದಗಿಯಲ್ಲಿ ನಡೆದಿದ್ದು, ಕಲಬುರಗಿ ಜಿಲ್ಲೆಯ ಅಫಜಲ್ಪುರದಿಂದ ವಿಜಯಪುರಕ್ಕೆ ಹೊರಟಿದ್ದ ಬಸ್ ಹೆಡ್ ಲೈಟ್ ಸಮಸ್ಯೆಯಾಗಿದ್ದು, ಆಗ ಪ್ರಯಾಣಿಕರನ್ನು ದಾರಿ ಮಧ್ಯದಲ್ಲಿಯೇ ಇಳಿಸಿ ಸರಿಪಡಿಸಿಕೊಂಡು ಬರಲು ಸಿಂದಗಿ ಡಿಪೋಗೆ ಬಸ್ ಹೊರಟಿದೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಈ ಬಸ್ ಸಿಂದಗಿ ನಗರ ಪ್ರವೇಶಿಸುತ್ತಿದ್ದ ಸಂದರ್ಭದಲ್ಲಿ ಚಾಲಕ ಮುರಿಗೆಪ್ಪ ಅಥಣಿ ಅವರಿಗೆ ಹೃದಯಘಾತವಾಗಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಆಗ ಬಸ್ ನಿಯಂತ್ರಣ ತಪ್ಪಿ ಪೆಟ್ರೋಲ್ ಬಂಕಿಗೆ ನುಗ್ಗಿದ್ದು ಅಲ್ಲಿದ್ದ ಜನ ಏಕಾಏಕಿ ನಡೆದ ಘಟನೆಯಿಂದ ಗಾಬರಿಯಾಗಿದ್ದಾರೆ.

ಕೂಡಲೇ ಸಮಯ ಪ್ರಜ್ಞೆ ಮೆರೆದ ಕಂಡಕ್ಟರ್ ಶರಣು ಬ್ರೇಕ್ ಹಾಕಿ ಬಸ್ ನಿಲ್ಲಿಸಿದ್ದು, ಹೆಚ್ಚಿನ ಅನಾಹುತ ತಪ್ಪಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಆಫ್ಜಲ್ಪುರ ಡಿಪೋ ಅಧಿಕಾರಿಗಳು ಸ್ಥಳಕ್ಕೆ ಬಂದು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read