BREAKING: ಓವರ್ ಟೇಕ್ ವಿಚಾರಕ್ಕೆ ರಸ್ತೆಯಲ್ಲಿ ಜಗಳ; KSRTC ಬಸ್ ಚಾಲಕನಿಗೆ ಚಾಕು ಇರಿತ

ಬೆಂಗಳೂರು: ಟಾಟಾ ಏಸ್ ಹಾಗೂ ಬಸ್ ನದುವೆ ಓವರ್ ಟೇಕ್ ಮಾಡುವ ವಿಚಾರವಾಗಿ ಎರಡು ವಾಹನಗಳ ಚಾಲಕರ ನಡುವೆ ಜಗಳ ನಡೆದು, ವಿಕೋಪಕ್ಕೆ ತಿರುಗಿ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನಿಗೆ ಚಾಕು ಇರಿದ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯಲ್ಲಿ ಈ ಘಟನೆ ನಡೆದಿದೆ. ಟಾಟಾ ಏಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕರಿಬ್ಬರ ನಡುವೆ ಗಲಾಟೆಯಾಗಿದೆ. ಬಸ್ ಚಾಲಕನಿಗೆ ಟಾಟಾ ಏಸ್ ಚಾಲಕ ಚಾಕು ಇರಿದಿದ್ದಾನೆ. ಬಸ್ ಕೊಪ್ಪಳದಿಂದ ಬೆಂಗಳೂರಿಗೆ ಬರುತ್ತಿತ್ತು. ಬಸ್ ಚಾಲಕ ಶಿವಪ್ಪ ಮಡಿವಾಳ ಗಾಯಗೊಂಡವರು.

ಗಂಭೀರವಾಗಿ ಗಾಯಗೊಂಡಿರುವ ಬಸ್ ಚಾಲಕನನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಟಾಟಾ ಏಸ್ ಚಾಲಕ ಭಾಸ್ಕರ್ ರೆಡ್ಡಿ ಎಂಬಾತನನ್ನು ದಾಬಸ್ ಪೇಟೆ ಪೊಲೀಸರು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read