HomeKarnatakaBIG NEWS: ಸಂಬಳ ಪಾವತಿಸುವಂತೆ ಆಗ್ರಹಿಸಿ ದಿಢೀರ್ ಪ್ರತಿಭಟನೆಗಿಳಿದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕರು

BIG NEWS: ಸಂಬಳ ಪಾವತಿಸುವಂತೆ ಆಗ್ರಹಿಸಿ ದಿಢೀರ್ ಪ್ರತಿಭಟನೆಗಿಳಿದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕರು

ಮಡಿಕೇರಿ: ಸಂಬಳ ಪಾವತಿಸುವಂತೆ ಒತ್ತಾಯಿಸಿ ಕೆ.ಎಸ್.ಆರ್.ಟಿ.ಸಿ ಚಾಲಕರು ದಿಢೀರ್ ಪ್ರತಿಭಟನೆಗಿಳಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ.

ಕೆ.ಎಸ್.ಆರ್.ಟಿ.ಸಿಯ 48 ಹೊರಗುತ್ತಿಗೆ ಚಾಲಕರು ವೇತನ ಪಾವತಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಬಸ್ ಗಳನ್ನು ರಸ್ತೆಗಳಿಸದೇ ಪ್ರತಿಭಟನೆ ನಡೆಸಿದ್ದು, ಹಲವೆಡೆ ಬಸ್ ಸಂಚಾರ ಸ್ಥಗಿತಗೊಂಡಿದೆ.

ಹೊರಗುತ್ತಿಗೆ ಆಧಾರದಲ್ಲಿ ನೇಮಕವಾಗಿದ್ದ ಬಸ್ ಚಾಲಕರು ಪೂಜ್ಯಾಯ ಸೆಕ್ಯೂರಿಟಿ ಏಜೆನ್ಸಿ ಮೂಲಕ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಇದ್ದ ಏಜೆನ್ಸಿ ಪ್ರತಿ ತಿಂಗಳು 23 ಸಾವಿರ ರೂಪಾಯಿ ಸಂಬಳ ಪಾವತಿ ಮಾಡುತ್ತಿತ್ತು. ಆದರೆ ಈಗ ಏಜೆನ್ಸಿ ಬದಲಾಗಿದ್ದು, 13-14 ಸಾವಿರ ಮಾತ್ರ ಸಂಬಳ ಪಾವತಿ ಮಾಡುತ್ತಿದೆ. ಅಲ್ಲದೇ ಸರಿಯಾಗಿ ವೇತನ ನೀಡುತ್ತಿಲ್ಲ . ಸಿ ಎಲ್ ರಜೆ ಕೂಡ ಕೊಡುತ್ತಿಲ್ಲ. ಇದರಿಂದ ಬಸ್ ಚಾಲಕರು ದಿಢೀರ್ ಪ್ರತಿಭಟನೆ ನಡೆಸಿದ್ದು, ಪೂರ್ಣ ಪ್ರಮಾಣದ ವೇತನ ಪಾವತಿಸುವಂತೆ ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular