HomeLatest Newsರಸ್ತೆ ಮಧ್ಯೆಯೇ ಹೊತ್ತಿ ಉರುದ KSRTC ಬಸ್

ರಸ್ತೆ ಮಧ್ಯೆಯೇ ಹೊತ್ತಿ ಉರುದ KSRTC ಬಸ್

ಮೈಸೂರು: ಚಲಿಸುತ್ತಿದ್ದ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ರಸ್ತೆ ಮಧ್ಯೆಯೇ ಹೊತ್ತಿ ಉರಿದ ಘಟನೆ ಬನ್ನೂರಿನಲ್ಲಿ ನಡೆದಿದೆ.

ಮೈಸೂರು ನಗರದ ಕೆ ಎಸ್ ಆರ್ ಟಿಸಿ ಬಸ್ ನಲ್ಲಿ ತಾಂತ್ರಿಕ ದೋಷದಿಂದಾಗಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ರಸ್ತೆ ಪಕ್ಕದಲ್ಲಿ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೋಡನೋಡುತ್ತಿದ್ದಂತೆ ಬಸ್ ತುಂಬಾ ವ್ಯಾಪಿಸಿದ ಬೆಂಕಿಗೆ ಬಸ್ ಹೊತ್ತಿ ಉರಿದಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬಸ್ ನ ಅರ್ಧದಷ್ಟು ಭಾಗ ಸುಟ್ಟು ಕರಕಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular