HomeKarnatakaBREAKING : ಬೆಳ್ಳಂ ಬೆಳಗ್ಗೆ ಚಿತ್ರದುರ್ಗದಲ್ಲಿ ಭೀಕರ ಅಪಘಾತ : 'KSRTC' ಬಸ್ –ಲಾರಿ ಡಿಕ್ಕಿಯಾಗಿ...

BREAKING : ಬೆಳ್ಳಂ ಬೆಳಗ್ಗೆ ಚಿತ್ರದುರ್ಗದಲ್ಲಿ ಭೀಕರ ಅಪಘಾತ : ‘KSRTC’ ಬಸ್ –ಲಾರಿ ಡಿಕ್ಕಿಯಾಗಿ ನಾಲ್ವರು ದುರ್ಮರಣ

ಚಿತ್ರದುರ್ಗ :  ಬೆಳ್ಳಂ ಬೆಳಗ್ಗೆ ಕೆಎಸ್ ಆರ್ ಟಿಸಿ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ನಾಲ್ವರು ದುರ್ಮರಣಕ್ಕೀಡಾದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ನಡೆದಿದೆ.

ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ KSRTC ಬಸ್ ಗೆ ಲಾರಿ ಡಿಕ್ಕಿಯಾಗಿದ್ದು, ಬಸ್ ನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ರಾಯಚೂರಿನ ರಮೇಶ್, ಬೆಂಗಳೂರು ಮೂಲದ   ಪಾರ್ವತಮ್ಮ ಎಂಬುವವರು ಸೇರಿ ನಾಲ್ವರು ಮೃತಪಟ್ಟಿದ್ದಾರೆ.6 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ.

ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular