HomeKarnatakaಬಸ್ ಪಾಸ್ ದರ ಹೆಚ್ಚಳ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್

ಬಸ್ ಪಾಸ್ ದರ ಹೆಚ್ಚಳ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆ ಬಸ್ ಪಾಸ್ ಗಳ ಪ್ರಯಾಣ ದರವನ್ನು ಶೇಕಡ 15 ರಷ್ಟು ಏರಿಕೆ ಮಾಡಲಾಗಿದ್ದು, ಇದರ ಬೆನ್ನಲ್ಲೇ ಬಸ್ ಪಾಸ್ ದರಗಳನ್ನು ಕೂಡ ಪರಿಷ್ಕರಿಸಲಾಗುವುದು ಎನ್ನಲಾಗಿತ್ತು.

ಆದರೆ, ಇದನ್ನು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅಲ್ಲಗಳೆದಿದ್ದು, ಸದ್ಯಕ್ಕೆ ಬಸ್ ಪಾಸ್ ದರ ಏರಿಕೆ ಇಲ್ಲವೆಂದು ತಿಳಿಸಿದ್ದಾರೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಯಾವುದೇ ಬಸ್ ಪಾಸ್ ದರವನ್ನು ಹೆಚ್ಚಳ ಮಾಡುವ ಪ್ರಸ್ತಾವನೆ ಸದ್ಯಕ್ಕೆ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ಆರ್ಥಿಕ ಹೊರೆ ಕಡಿಮೆ ಮಾಡಿಕೊಳ್ಳುವ ಉದ್ದೇಶದಿಂದ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ. ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿ 4 ನಿಗಮಗಳ ಯಾವುದೇ ವಿಧದ ಬಸ್ ಪಾಸ್ ದರ ಹೆಚ್ಚಿಸುವ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಿಲ್ಲ. ಪಾಸ್ ದರ ಹೆಚ್ಚಳ ಮಾಡುವ ಚಿಂತನೆಯೂ ಸಾರಿಗೆ ಇಲಾಖೆಗೆ ಇಲ್ಲವೆಂದು ಸಚಿವರು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular