HomeKarnatakaನವೆಂಬರ್ 5ರಿಂದ ಕರ್ನಾಟಕದಲ್ಲಿ ಸರ್ಕಾರಿ ಬಸ್ ಪ್ರಯಾಣ ದರ ಏರಿಕೆ: ನಾಳೆ ಅಂತಿಮ ನಿರ್ಧಾರ ಎಂದ...

ನವೆಂಬರ್ 5ರಿಂದ ಕರ್ನಾಟಕದಲ್ಲಿ ಸರ್ಕಾರಿ ಬಸ್ ಪ್ರಯಾಣ ದರ ಏರಿಕೆ: ನಾಳೆ ಅಂತಿಮ ನಿರ್ಧಾರ ಎಂದ ಸಚಿವ ಬೈರತಿ ಸುರೇಶ್

ಚಿಕ್ಕಬಳ್ಳಾಪುರ: ಈ ತಿಂಗಳ 5 ರಿಂದ ಸರ್ಕಾರಿ ಸ್ವಾಮ್ಯದ ಸಾರಿಗೆ ಬಸ್ ಗಳ ಪ್ರಯಾಣ ದರ ಹೆಚ್ಚಳವಾಗಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಈ ವಿಷಯ ತಿಳಿಸಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಒಂದು ವರ್ಷದಲ್ಲಿ 5 ಬಾರಿ ಡೀಸೆಲ್ ಬೆಲೆ ಏರಿಕೆ ಮಾಡಿದೆ. ಇದರಿಂದ ನಮ್ಮ ನಾಲ್ಕೂ ಸಾರಿಗೆ ನಿಗಮಗಳಿಗೆ ವಾರ್ಷಿಕ 2 ಸಾವಿರ ಕೋಟಿ ರೂಪಾಯಿ ನಷ್ಟ ಆಗುತ್ತಿದೆ. ಈಗಾಗಲೇ ಸಂಸ್ಥೆಗಳು 9 ಸಾವಿರ ಕೋಟಿ ರೂಪಾಯಿ ನಷ್ಟದಲ್ಲಿವೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಏರಿಕೆ ಮಾಡುವುದು ಅನಿವಾರ್ಯ ಆಗಿದೆ ಎಂದರು.

ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ದರ ಏರಿಕೆ ನಿರ್ಧಾರವನ್ನು ಕೈಗೊಳ್ಳುವ ಜವಾಬ್ದಾರಿಯನ್ನು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಸಂಪುಟ ಸಾರಿಗೆ ಇಲಾಖೆಗೆ ನೀಡಿದೆ ಎಂದು ಹೇಳಿದರು.

4 ರಂದು ನಿರ್ಧಾರ

ಈ ಹಿನ್ನೆಲೆಯಲ್ಲಿ ನವೆಂಬರ್ 4 ರಂದು ಇಲಾಖೆ ಮತ್ತು ಸಾರಿಗೆ ನಿಗಮಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಎಷ್ಟು ಪ್ರಮಾಣದಲ್ಲಿ ಹೆಚ್ಚಿಸಬೇಕೆಂದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಮತ್ತು ನವೆಂಬರ್ 5 ರಿಂದ ಹೊಸ ಪ್ರಯಾಣ ದರ ಜಾರಿಗೆ ಬರಲಿದೆ ಎಂದರು.

ಸುಧಾಕರ್ ಗೆ ಟಾಂಗ್

ಬಸ್ ಪ್ರಯಾಣ ದರ ಏರಿಕೆ ಮಾಡುವ ಬಗ್ಗೆ ಸಂಸದ ಡಾ. ಸುಧಾಕರ್ ಅವರು ಮಾಡಿರುವ ಟೀಕೆಗೆ ಸಚಿವ ಬೈರತಿ ಸುರೇಶ್ ಟಾಂಗ್ ನೀಡಿದರು.

ಇತರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಪ್ರಯಾಣ ದರ ಕಡಿಮೆ ಇದೆ. ಸುಧಾಕರ್ ಅವರು ಕಣ್ಣಿಗೆ ಬಟ್ಟೆ ಕಟ್ಟಿ ಮಾತನಾಡುವ ಬದಲು ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಪ್ರಯಾಣ ದರ ಎಷ್ಟಿದೆ ಎಂಬುದನ್ನು ಗಮನಿಸಲಿ. ಹಾಗಾದರೆ ನಷ್ಟದಲ್ಲಿರುವ ಸಾರಿಗೆ ಸಂಸ್ಥೆಗಳನ್ನು ಮುಚ್ಚಬೇಕಾ ಎಂದು ಕಿಡಿಕಾರಿದರು.

ಬಿಜೆಪಿಗೆ ರೈತರಿಂದಲೇ ಪಾಠ

ಹಾಲಿನ ದರವನ್ನು ಹೆಚ್ಚಲು ಮಾಡಿರುವ ಬಗ್ಗೆ ಬಿಜೆಪಿಯವರು ಪ್ರತಿಭಟನೆ ಮಾಡಲಿ. ನಮ್ಮ ಸರ್ಕಾರ ಸಾಕಷ್ಟದಲ್ಲಿರುವ ರೈತರಿಗೆ ನೆರವಾಗಬೇಕೆಂಬ ಉದ್ದೇಶದಿಂದ ಹಾಲಿನ ದರವನ್ನು ಹೆಚ್ಚಿಸಿದೆ ಎಂದರು.

ಆದರೆ, ಬಿಜೆಪಿಯವರು ರೈತ ವಿರೋಧಿ ಧೋರಣೆ ಹೊಂದಿದ್ದಾರೆ. ಅವರಿಗೆ ಚುನಾವಣೆಯಲ್ಲಿ ರೈತರೇ ಪಾಠ ಕಲಿಸಲಿದ್ದಾರೆ ಎಂದು ಬೈರತಿ ಸುರೇಶ್ ಎಚ್ಚರಿಸಿದರು.

ಹೆಚ್ಚಿಸಿರುವ 8 ರೂಪಾಯಿ ದರದಲ್ಲಿ 7 ರೂಪಾಯಿಯನ್ನು ರೈತರಿಗೆ ನೀಡಲಾಗುತ್ತದೆ ಎಂದೂ ಅವರು ಸ್ಪಷ್ಟಪಡಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular