ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: ಗೌರಿ –ಗಣೇಶ ಹಬ್ಬಕ್ಕೆ 1200 ಹೆಚ್ಚುವರಿ KSRTC ಬಸ್, ಶೇ. 10 ರಷ್ಟು ರಿಯಾಯ್ತಿ

ಬೆಂಗಳೂರು: ಗೌರಿ -ಗಣೇಶ ಹಬ್ಬಕ್ಕೆ ಕೆಎಸ್ಆರ್ಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. 1200 ಹೆಚ್ಚುವರಿ ಬಸ್ ಗಳ ಸಂಚಾರಕ್ಕೆ ಕೆಎಸ್ಆರ್ಟಿಸಿ ವ್ಯವಸ್ಥೆ ಮಾಡಿದ್ದು, ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್ ಗಳು ಸೇವೆ ಇರಲಿದೆ.

ಮೆಜೆಸ್ಟಿಕ್ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಶಿವಮೊಗ್ಗ, ಕುಕ್ಕೆ ಸುಬ್ರಹ್ಮಣ್ಯ, ಮಂಗಳೂರು, ಹಾಸನ, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು. ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮೊದಲಾದ ಸ್ಥಳಗಳಿಗೆ ವಿಶೇಷ ಬಸ್ ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಮಡಿಕೇರಿಗೆ ಹೆಚ್ಚುವರಿ ಬಸ್ ಗಳ ಸೇವೆ ಇರಲಿದೆ,

ಶಾಂತಿನಗರ ಬಸ್ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳ ಕಡೆಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ,

ಪ್ರಯಾಣಿಕರ ಅನುಕೂಲಕ್ಕೆ ಟಿಕೆಟ್ ಕಾಯ್ದಿರಿಸುವ ಸೌಲಭ್ಯ ಕೂಡ ಕಲ್ಪಿಸಲಾಗಿದೆ, www.ksrtc.kar.gov.in ವೆಬ್ಸೈಟ್ ನಲ್ಲಿ ಟಿಕೆಟ್ ಬುಕಿಂಗ್ ಮಾಡಬಹುದಾಗಿದೆ. 4 ಅಥವಾ 4ಕ್ಕಿಂತ ಹೆಚ್ಚು ಟಿಕೆಟ್ ಕಾಯ್ದಿರಿಸಿದವರಿಗೆ ಶೇ. 5 ರಷ್ಟು ರಿಯಾಯಿತಿ ನೀಡಲಾಗುವುದು. ಹೋಗುವ ಮತ್ತು ಬರುವ ಟಿಕೆಟ್ ಒಟ್ಟಿಗೆ ಬುಕಿಂಗ್ ಮಾಡಿದಲ್ಲಿ ಶೇ. 10 ರಷ್ಟು ರಿಯಾಯಿತಿ ನೀಡಲಾಗುತ್ತದೆ. ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ, ಪುದುಚೇರಿಯ ಪ್ರಮುಖ ನಗರಗಳಲ್ಲಿಯೂ ಕೌಂಟರ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಮಾಹಿತಿ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read