HomeKarnatakaಮಾ. 31 ರಿಂದ SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: KSRTC ಬಸ್ ಗಳಲ್ಲಿ...

ಮಾ. 31 ರಿಂದ SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: KSRTC ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿಯಿಂದ ಸಿಹಿ ಸುದ್ದಿ ನೀಡಲಾಗಿದೆ. SSLC  ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಉಚಿತವಾಗಿ ಪ್ರಯಾಣಿಸಬಹುದು. ಪರೀಕ್ಷಾ ದಿನಗಳಂದು ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸಮೀಪವೇ ಬಸ್ ನಿಲುಗಡೆ ಮಾಡಲು ಚಾಲಕರಿಗೆ ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular