HomeLatest Newsಕೆ.ಎಸ್.ಆರ್.ಟಿ.ಸಿ ಬಸ್- ಟ್ರಕ್ ನಡುವೆ ಭೀಕರ ಅಪಘಾತ: ಚಾಲಕ ಸೇರಿ ಇಬ್ಬರ ಸ್ಥಿತಿ ಗಂಭೀರ

ಕೆ.ಎಸ್.ಆರ್.ಟಿ.ಸಿ ಬಸ್- ಟ್ರಕ್ ನಡುವೆ ಭೀಕರ ಅಪಘಾತ: ಚಾಲಕ ಸೇರಿ ಇಬ್ಬರ ಸ್ಥಿತಿ ಗಂಭೀರ

ಶಿವಮೊಗ್ಗ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಬಳಿ ನಡೆದಿದೆ.

ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಬಸ್ ಹಾಗೂ ಆನಂದಪುರದಿಂದ ಸಾಗರದತ್ತ ತೆರಳುತ್ತಿದ್ದ ಟ್ರಕ್ ಗಳ ನಡುವೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬಸ್ ಚಾಲಕ ಶಿವಾನಂದ ನಾಯ್ಕ್ ಹಾಗೂ ಕಂಡಕ್ಟರ್ ಫಕೀರಪ್ಪ ತೀವ್ರವಾಗಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular