HomeKarnatakaBIG NEWS: ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿ: ಮಹಿಳೆ ದುರ್ಮರಣ; 20 ಪ್ರಯಾಣಿಕರಿಗೆ ಗಂಭೀರ ಗಾಯ

BIG NEWS: ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿ: ಮಹಿಳೆ ದುರ್ಮರಣ; 20 ಪ್ರಯಾಣಿಕರಿಗೆ ಗಂಭೀರ ಗಾಯ

ವಿಜಯನಗರ: ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದಲ್ಲಿ ಪಲ್ಟಿಯಾಗಿ ಬಿದ್ದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಸುತ್ತೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.

ಘಟನೆಯಲ್ಲಿ ಬಸ್ ನಲ್ಲಿದ್ದ ಮಹಿಳೆ ಹನುಮಕ್ಕ (45) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಸ್ ದಾವಣಗೆರೆಯಿಂದ ಹರಪನಹಳ್ಳಿ ಕಡೆ ಹೊರಟಿತ್ತು ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular