HomeKarnatakaKSRTC ಬಸ್ - ಬೈಕ್ ಡಿಕ್ಕಿ; ಹಿಂಬದಿ ಕುಳಿತಿದ್ದ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

KSRTC ಬಸ್ – ಬೈಕ್ ಡಿಕ್ಕಿ; ಹಿಂಬದಿ ಕುಳಿತಿದ್ದ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಗೆ ಮತ್ತೋರ್ವ ಬೈಕ್ ಸವಾರ ಬಲಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ.

ವೆಂಕಟಗಿರಿಕೋಟೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿ ಹಿಂಬದಿ ಕುಳಿತಿದ್ದ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಡಿವೇಲು (45) ಮೃತ ವ್ಯಕ್ತಿ. ಬೈಕ್ ಓಡಿಸುತ್ತಿದ್ದ ಮಧು ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೈಕ್ ಸವಾರರು ನಂದಿ ಬೆಟ್ಟಕ್ಕೆಂದು ಹೋಗುತ್ತಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ.

ದೇವನಹಳ್ಳಿಯ ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular