HomeKarnatakaBREAKING: KSRTC ಬಸ್-ಕಾರು ಅಪಘಾತ ಪ್ರಕರಣ; ಸಾವಿನ ಸಂಖ್ಯೆ 5ಕ್ಕೆ ಏರಿಕೆ

BREAKING: KSRTC ಬಸ್-ಕಾರು ಅಪಘಾತ ಪ್ರಕರಣ; ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಕಾರವಾರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ.

ಇಂದು ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತ ಐವರು ತಮಿಳುನಾಡು ಮೂಲದವರು ಎಂದು ತಿಳಿದುಬಂದಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿತ್ತು. ಈ ವೇಳೆ ಈ ದುರಂತ ಸಂಭವಿಸಿದೆ.

ಶಿರಸಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular