HomeKarnatakaBIG NEWS: KSRTC ಬಸ್-ಕಾರು ಭೀಕರ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ

BIG NEWS: KSRTC ಬಸ್-ಕಾರು ಭೀಕರ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ

ಚಿಕ್ಕಮಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ನಡೆದಿದೆ.

ಪೂಜಾ ಹಿರೇಮಠ ಹಾಗೂ ರಾಜಶೇಖರ ಮೃತ ತಾಯಿ-ಮಗ. ಗಾಯಾಳು ಶಿವಯಾಗಯ್ಯ ಅವರನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಧರ್ಮಸ್ಥಳದಿಂದ ಮೂಡಿಗೆರೆ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಕಾರು, ಸಕಲೇಶಪುರದಿಂದ ಮೂಡಿಗೆರೆ ಕಡೆ ತೆರಳುತ್ತಿದ್ದ ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular