SHOCKING NEWS: ಚಲಿಸುತ್ತಿದ್ದ ಬಸ್ ಹಿಂಬದಿ ಚಕ್ರಕ್ಕೆ ಬಿದ್ದು ವ್ಯಕ್ತಿ ಆತ್ಮಹತ್ಯೆ

ಚಾಮರಾಜನಗರ: ಚಲಿಸುತ್ತಿದ್ದ ಹಿಂಬದಿ ಚಕ್ರಕ್ಕೆ ಬಿದ್ದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಚಾಮರಾಜನಗರ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ನಡೆದಿದೆ.

ರಂಗಸ್ವಾಮಿ ಮೃತ ದುರ್ದೈವಿ. ಚಾಮರಾಜನಗರ ತಾಲೂಕಿನ ಯಲಕ್ಕೂರು ನಿವಾಸಿ ಎಂದು ತಿಳಿದುಬಂದಿದೆ. ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನ ಹಿಂಬದಿ ಚಕ್ರಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾನೆ.

ಘಟನಾ ಸ್ಥಳಕ್ಕೆ ಚಾಮರಾಜನಗರ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read