HomeKarnatakaBIG NEWS: ಪ್ರಯಾಣಿಕನಿಂದ ಬಾಲಕಿಗೆ ಲೈಂಗಿಕ ಕಿರುಕುಳ; ಬಸ್ ಸಮೇತ ಪೊಲೀಸ್ ಠಾಣೆಗೆ ಕರೆತಂದ ಚಾಲಕ;...

BIG NEWS: ಪ್ರಯಾಣಿಕನಿಂದ ಬಾಲಕಿಗೆ ಲೈಂಗಿಕ ಕಿರುಕುಳ; ಬಸ್ ಸಮೇತ ಪೊಲೀಸ್ ಠಾಣೆಗೆ ಕರೆತಂದ ಚಾಲಕ; ಕಾಮುಕ ಅರೆಸ್ಟ್

ಮಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಪ್ರಯಾಣಿಕನೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ.

ಮಂಗಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಈ ಘಟನೆ ನಡೆದಿದೆ. ಪ್ರಯಾಣಿಕನೊಬ್ಬ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ್ದಾನೆ. ಬಾಲಕಿ ಸಹ ಪ್ರಯಾಣಿಕರಿಗೆ ಈ ವಿಷಯ ತಿಳಿಸಿದ್ದಾಳೆ. ಈ ವೇಳೆ ಆರೋಪಿ ಬಸ್ ನಿಂದ ಇಳಿಯಲು ಯತ್ನಿಸಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಹ ಪ್ರಯಾಣಿಕರು ಆತನನ್ನು ಬಸ್ ನಿಂದ ಇಳಿಯದಂತೆ ತಡೆದಿದ್ದಲ್ಲದೇ, ಬಸ್ ನ್ನು ನೇರವಾಗಿ ಪೊಲೀಸ್ ಠಾಣೆಗೆ ಕರೆದೊಯ್ಯುವಂತೆ ಚಾಲಕನಿಗೆ ತಾಕೀತು ಮಾಡಿದ್ದಾರೆ. ಪ್ರಯಾಣಿಕರ ಒತ್ತಡಕ್ಕೆ ಬಸ್ ಚಾಲಕ ಬಸ್ ನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ತಂದು ನಿಲ್ಲಿಸಿದ್ದಾನೆ.

ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 40 ವರ್ಷದ ಉದಯ್ ಬಂಧಿತ ಆರೋಪಿ. ಬಾಲಕಿಗೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular