HomeKarnatakaKSRTC ಹಾಗೂ ಖಾಸಗಿ ಬಸ್ ಗಳ ನಡುವೆ ಭೀಕರ ಅಪಘಾತ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ...

KSRTC ಹಾಗೂ ಖಾಸಗಿ ಬಸ್ ಗಳ ನಡುವೆ ಭೀಕರ ಅಪಘಾತ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಮೈಸೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಖಾಸಗಿ ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಮಣಿಪಾಲ್ ಆಸ್ಪತ್ರೆಯ ಸಿಗ್ನಲ್ ಬಳಿ ಈ ಅಪಘತ ಸಂಭವಿಸಿದೆ. ಎರಡೂ ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಇದೇ ವೇಳೆ ಖಾಸಗಿ ಬಸ್ ಪಕ್ಕದಲ್ಲಿ ಹೋಗುತ್ತಿದ್ದ ಇನ್ನೋವಾ ಕಾರಿಗೂ ಡಿಕ್ಕಿ ಹೊಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋವಾ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

 

For Latest News Updates, Join Our Whatsapp Community🚩
RELATED ARTICLES

Most Popular