HomeKarnatakaKSRTC ಬಸ್ ನಿಂದ ಬಿದ್ದು ಮಹಿಳೆ ದುರ್ಮರಣ

KSRTC ಬಸ್ ನಿಂದ ಬಿದ್ದು ಮಹಿಳೆ ದುರ್ಮರಣ

ಚಾಮರಾಜನಗರ: ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ನಡೆದಿದೆ.

ವಿನೋದಾ ಮೃತ ಮಹಿಳೆ. ಮಲೆಮಹದೇಶ್ವರ ಬೆಟ್ಟದಿಂದ ಹನೂರು ಕಡೆ ಹೊರಟಿದ್ದ ಬಸ್ ಹತ್ತಿದ್ದ ಮಹಿಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆ.ಎಸ್.ಆರ್.ಟಿ.ಸಿ ಬಸ್ ಹತ್ತಿದ್ದ ಮಹಿಳೆ ಬಸ್ ರಶ್ ಇದ್ದುದರಿಂದ ಬಸ್ ಹಿಂಬದಿಯ ಬಾಗಿಲಿನಲ್ಲಿ ನಿಂತಿದ್ದರು. ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಮಾದಪ್ಪನ ದರ್ಶನ ಪಡೆದು ಮನೆಗೆ ಹಿಂತಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ನಿನ್ನೆ ಮಧ್ಯಾಹ್ನ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular