ತುಮಕೂರು: ಯುವಕನೊಬ್ಬ ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಅಗ್ರಹಾರದಲ್ಲಿ ನಡೆದಿದೆ.
ತಿಮ್ಮೇಗೌಡ ಮೃತ ಯುವಕ. ತುಮಕೂರಿನ ಕುಣಿಗಲ್ ಮೂಲದ ನಿವಾಸಿ. ರಸ್ತೆಯಲ್ಲಿ ಬಸ್ ಚಲಿಸುತ್ತಿದ್ದ ವೇಳೆ ಏಕಾಏಕಿ ಬಸ್ ಗೆ ನುಗ್ಗಿದ್ದು, ಯುವಕನ ತಲೆಯ ಮೇಲೆಯೇ ಬಸ್ ಹರಿದು ಹೋಗಿದೆ. ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಬಸ್ ಗೆ ಯುವಕ ಹಾರಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕೌಟುಂಬಿಕ ಕಲಹದಿಂದ ನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

