ಸಾರಿಗೆ ನೌಕರರಿಗೆ ಸಿಎಂ ಗುಡ್ ನ್ಯೂಸ್: ಬಜೆಟ್ ನಲ್ಲಿ ಬಾಕಿ ಹಣ ಬಿಡುಗಡೆ

ಬೆಂಗಳೂರು: ಮುಂಬರುವ ಬಜೆಟ್‌ನಲ್ಲಿ ಬಾಕಿ ಉಳಿದಿರುವ ಹಣವನ್ನು ಬಿಡುಗಡೆಗೊಳಿಸಿ ಸಾರಿಗೆ ನೌಕರರ ಹಿತ ಕಾಪಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಭಾನುವಾರ ಸಾರಿಗೆ ಸಚಿವರು ಹಾಗೂ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜೊತೆ ಸಭೆ ನಡೆಸಿ ಚರ್ಚಿಸಿದೆ. ಸಾರಿಗೆ ನೌಕರರು ತಮ್ಮ ವಿವಿಧ 13 ಬೇಡಿಕೆಗಳನ್ನು ಮುಂದಿಟ್ಟು, ಮುಷ್ಕರಕ್ಕೆ ಕರೆ ನೀಡಿದ್ದರು. ಈ ಎಲ್ಲಾ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಸಮಾಲೋಚಿಸಿ, ಪರಿಹರಿಸುವ ನಿರ್ಧಾರಕ್ಕೆ ನಮ್ಮ ಸರ್ಕಾರ ಬಂದಿದ್ದು, ಇದರಿಂದ ನೌಕರರು ಮುಷ್ಕರ ಕೈಬಿಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರ ಸಾರಿಗೆ ನಿಗಮಗಳಿಗೆ ನೀಡಬೇಕಿರುವ ಹಣದಲ್ಲಿ ರೂ.5,900 ಕೋಟಿಯನ್ನು ಬಾಕಿ ಉಳಿಸಿದ್ದರಿಂದ ಸಮಸ್ಯೆ ಉದ್ಭವವಾಗಿದೆ. ನೌಕರರ ಕಷ್ಟವನ್ನು ಮನಗಂಡು ನಮ್ಮ ಸರ್ಕಾರ ರೂ.2,000 ಕೋಟಿಯನ್ನು ಈಗಾಗಲೇ ಬಿಡುಗಡೆ ಮಾಡಿದ್ದು, ಮುಂಬರುವ ಬಜೆಟ್‌ನಲ್ಲಿ ಬಾಕಿ ಉಳಿದಿರುವ ಹಣವನ್ನು ಬಿಡುಗಡೆಗೊಳಿಸಿ ನೌಕರರ ಹಿತ ಕಾಪಾಡಲು ನಿರ್ಧರಿಸಿದೆ ಎಂದು ಸಿಎಂ ತಿಳಿಸಿದ್ದಾರೆ.

ಮುಷ್ಕರ ನಿರ್ಧಾರದಿಂದ ಹಿಂದೆ ಸರಿದಿರುವ ಸಾರಿಗೆ ನೌಕರರಿಗೆ ಧನ್ಯವಾದಗಳು. ನಿಮ್ಮ ಅಹವಾಲುಗಳನ್ನು ಸಮಚಿತ್ತದಿಂದ ಆಲಿಸಿ ಪರಿಹರಿಸಲು ನಮ್ಮ ಸರ್ಕಾರ ಮುಕ್ತವಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read