HomeKarnatakaಚಲಿಸುತ್ತಿದ್ದ ವೇಳೆಯಲ್ಲೇ ಕಳಚಿದ KSRTC ಬಸ್ ಬಾಗಿಲು: ಪ್ರಯಾಣಿಕ ಕೆಳಗೆ ಬಿದ್ದು ಸಾವು

ಚಲಿಸುತ್ತಿದ್ದ ವೇಳೆಯಲ್ಲೇ ಕಳಚಿದ KSRTC ಬಸ್ ಬಾಗಿಲು: ಪ್ರಯಾಣಿಕ ಕೆಳಗೆ ಬಿದ್ದು ಸಾವು

ಮೈಸೂರು: ಕೆಎಸ್ಆರ್ಟಿಸಿ ಬಸ್ ಬಾಗಿಲು ಕಳಚಿ ಬಿದ್ದು ಪ್ರಯಾಣಿಕರೊಬ್ಬರು ಹೊರ ಬಿದ್ದು ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ಬಳಿ ನಡೆದಿದೆ.

ಹೊಮ್ಮರಗಹಳ್ಳಿ ಗ್ರಾಮದ ನಾಗೇಶ್(48) ಮೃತಪಟ್ಟವರು. ಹೆಚ್.ಡಿ. ಕೋಟೆ ತಾಲೂಕಿನ ಮೈಸೂರು ಮಾನಂದವಾಡಿ ರಸ್ತೆಯ ಪುರ ಗ್ರಾಮದ ಬಳಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪುರ ಗ್ರಾಮದ ಕೆರೆ ಏರಿ ಮೇಲೆ ಚಾಲಕ ಅತಿ ವೇಗವಾಗಿ ಬಸ್ ಚಾಲನೆ ಬಸ್ ಚಾಲನೆ ಮಾಡಿದ್ದು, ಫುಟ್ ಬೋರ್ಟ್ ಮೇಲೆ ನಿಂತಿದ್ದ ನಾಗೇಶ್ ಆಯತಪ್ಪಿ ಡೋರ್ ಮೇಲೆ ಬಿದ್ದಿದ್ದಾರೆ. ಈ ವೇಳೆ ಡೋರ್ ಕಳಚಿ ಬಿದ್ದಿದೆ. ನಾಗೇಶ್ ಕೂಡ ಕೆಳಗೆ ಬಿದ್ದು ತಲೆಗೆ ಪೆಟ್ಟಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕೆಎಸ್ಆರ್ಟಿಸಿ ಚಾಲಕನ ನಿರ್ಲಕ್ಷವೇ ನಾಗೇಶ್ ಸಾವಿಗೆ ಕಾರಣ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು, ಕುಟುಂಬದವರಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಕೆಎಸ್ಆರ್ಟಿಸಿ ಘಟಕ ವ್ಯವಸ್ಥಾಪಕ ತ್ಯಾಗರಾಜ್ ಮೃತರ ಕುಟುಂಬದವರಿಗೆ 25,000 ರೂ. ಪರಿಹಾರ ನೀಡಿದ್ದು, ಹೆಚ್ಚುವರಿ ಪರಿಹಾರಕ್ಕೆ ಸರ್ಕಾರದ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular