HomeKarnatakaನಿಲ್ಲಿಸುವ ಮೊದಲೇ ಬಸ್ ಬಾಗಿಲು ತೆರೆದು ಕೆಳಗೆ ಬಿದ್ದ ಮಹಿಳೆ ಸಾವು

ನಿಲ್ಲಿಸುವ ಮೊದಲೇ ಬಸ್ ಬಾಗಿಲು ತೆರೆದು ಕೆಳಗೆ ಬಿದ್ದ ಮಹಿಳೆ ಸಾವು

ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಬಸ್ ಸಂಚರಿಸುವ ಸಂದರ್ಭದಲ್ಲಿ ಬಾಗಿಲು ತೆರೆದು ಆಯತಪ್ಪಿ ಕೆಳಗೆ ಬಿದ್ದ ಮಹಿಳೆ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಹೇಮಾವತಿ(32) ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಬುಧವಾರ ಬೇಲೂರಿನಿಂದ ಚಿಕ್ಕಮಗಳೂರಿನ ತಾಯಿ ಮನೆಗೆ ಬರುತ್ತಿದ್ದ ಸಂದರ್ಭದಲ್ಲಿ ಚಿಕ್ಕಮಗಳೂರಿನ ಕೋಟೆ ಸಮೀಪ ಬಸ್ ನಿಲ್ಲಿಸುವ ಮೊದಲೇ ಬಾಗಿಲು ತೆರೆದುಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಬಾಗಿಲ ಪಕ್ಕದಲ್ಲಿಯೇ ಇದ್ದ ಹೇಮಾವತಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ಕಳುಹಿಸುವ ವೇಳೆ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular