ಕೆಎಸ್ಆರ್ಟಿಸಿ ಚಾಲಕರು/ ನಿರ್ವಾಹಕರ ಹುದ್ದೆಗಳ ನೇಮಕಾತಿಗೆ ಪರೀಕ್ಷೆ

ಬೆಂಗಳೂರು: ಕೆಎಸ್ಆರ್ಟಿಸಿ ಚಾಲಕ ಕಂ ನಿರ್ವಾಹಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಡಿಸೆಂಬರ್ 16 ರಿಂದ ಹಾಸನದ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ನಡೆಸಲಾಗುವುದು.

ಡಿಸೆಂಬರ್ 10 ರಂದು ಮಧ್ಯಾಹ್ನ 1 ಗಂಟೆಯಿಂದ ಅರ್ಹ ಅಭ್ಯರ್ಥಿಗಳು ನಿಗಮದ ಅಧಿಕೃತ ವೆಬ್ಸೈಟ್ ನಲ್ಲಿ ಕರೆ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ನಂತರ ಕರೆ ಪತ್ರದಲ್ಲಿರುವ ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕ ಮತ್ತು ಸಮಯಕ್ಕೆ ವೃತ್ತಿ ತರಬೇತಿ ಪರೀಕ್ಷೆಗೆ ಹಾಜರಾಗುವಂತೆ ತಿಳಿಸಲಾಗಿದೆ.

ಅಭ್ಯರ್ಥಿಗಳು ಗಣಕಯಂತ್ರ ಚಾಲನಾ ಪಥದಲ್ಲಿ ಗಳಿಸಿದ ಅಂಕಗಳ ಮೆರಿಟ್ ಮತ್ತು ಅಧಿಸೂಚನೆಯ ಸಂದರ್ಭದಲ್ಲಿ ಚಾಲ್ತಿಯಲ್ಲಿದ್ದ ಮೀಸಲು ನಿಯಮಗಳಿಗೆ ಅನುಗುಣವಾಗಿ ಪಾರದರ್ಶಕವಾಗಿ ಪರೀಕ್ಷೆ ನಡೆಯುತ್ತದೆ. ಅಭ್ಯರ್ಥಿಗಳು ಯಾವುದೇ ಶಿಫಾರಸು, ಮಧ್ಯವರ್ತಿಗಳ ಆಮಿಷಗಳಿಗೆ ಒಳಗಾಗಬಾರದು ಎಂದು ಕೆಎಸ್ಆರ್ಟಿಸಿ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read