HomeKarnatakaಸಾರಿಗೆ ನೌಕರರಿಂದ ಅನಿರ್ಧಿಷ್ಟವಾಧಿ ಮುಷ್ಕರ

ಸಾರಿಗೆ ನೌಕರರಿಂದ ಅನಿರ್ಧಿಷ್ಟವಾಧಿ ಮುಷ್ಕರ

ಬೆಂಗಳೂರು: 2021 ರಲ್ಲಿ ಮುಷ್ಕರ ನಡೆಸಿ ವಜಾಗೊಂಡಿರುವ ರಾಜ್ಯದ 4 ಸಾರಿಗೆ ನಿಗಮಗಳ ನೌಕರರನ್ನು ಮರು ನೇಮಕಾತಿ ಮಾಡಿಕೊಳ್ಳಬೇಕೆಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗಿದೆ.

ಯಾವುದೇ ಷರತ್ತು ಇಲ್ಲದೇ 2021 ರಲ್ಲಿ ವಜಾಗೊಂಡ ನೌಕರರ ಮರು ನೇಮಕಾತಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘದ ನೇತೃತ್ವದಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸಿದ್ದಾರೆ. ಸಂಘದ ರಾಜ್ಯಾಧ್ಯಕ್ಷ ಜಗದೀಶ್ ಮಾತನಾಡಿ, ವಜಾಗೊಂಡ ನೌಕರರನ್ನು ನೇಮಕ ಮಾಡಿಕೊಳ್ಳಬೇಕು. ನೌಕರರು ಮತ್ತು ಅವರ ಕುಟುಂಬದವರ ಮೇಲಿನ ಎಲ್ಲಾ ಪ್ರಕರಣ ವಾಪಸ್ ಪಡೆಯಬೇಕು. ವೇತನ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular