HomeKarnatakaಹಬ್ಬದ ವೇಳೆ ಖಾಸಗಿ ಬಸ್ ಗಳ ಸುಲಿಗೆಗೆ ಬ್ರೇಕ್: ದುಬಾರಿ ಟಿಕೆಟ್ ವಿರುದ್ಧ ಇಂದಿನಿಂದ ತಪಾಸಣೆ...

ಹಬ್ಬದ ವೇಳೆ ಖಾಸಗಿ ಬಸ್ ಗಳ ಸುಲಿಗೆಗೆ ಬ್ರೇಕ್: ದುಬಾರಿ ಟಿಕೆಟ್ ವಿರುದ್ಧ ಇಂದಿನಿಂದ ತಪಾಸಣೆ ಶುರು: ನಿಯಮ ಉಲ್ಲಂಘಿಸಿದ ವಾಹನಗಳ ಜಪ್ತಿಗೆ ಆದೇಶ

ಬೆಂಗಳೂರು: ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಂದ ಹೆಚ್ಚಿನ ಪ್ರಯಾಣ ದರ ವಸೂಲಿ ಮಾಡುವ ಖಾಸಗಿ ಬಸ್‌ ಗಳಿಗೆ ಕಡಿವಾಣ ಹಾಕಲು ಸಾರಿಗೆ ಇಲಾಖೆ ಮುಂದಾಗಿದ್ದು, ಸೆ.11 ರಿಂದ 15ರವರೆಗೆ ರಾಜ್ಯಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಲಿದೆ.

ಪ್ರತಿ ಬಾರಿ ಹಬ್ಬ ಸಾಲು ಸಾಲು ರಜೆ ಸಂದರ್ಭದಲ್ಲಿ ಖಾಸಗಿ ಬಸ್ ಸೇರಿ ಇನ್ನಿತರ ಸಾರ್ವಜನಿಕ ಸೇವೆ ನೀಡುವ ವಾಹನಗಳು ಪ್ರಯಾಣಿಕರಿಂದ ನಿಗದಿಗಿಂತ ಎರಡು ಮೂರು ಪಟ್ಟು ಹೆಚ್ಚಿನ ಪ್ರಯಾಣ ದರ ವಸೂಲಿ ಮಾಡುತ್ತವೆ. ದರ ಏರಿಕೆಗೆ ಕಡಿವಾಣ ಹಾಕದ ಸಾರಿಗೆ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದಾಗ ಸಾರಿಗೆ ಇಲಾಖೆ ನಾಮಕಾವಸ್ಥೆ ಕೆಲ ಬಸ್‌ಗಳನ್ನು ತಪಾಸಣೆ ನಡೆಸಿ ನಿಯಮದಂತೆ ಕ್ರಮ ಕೈಗೊಳ್ಳುತ್ತಾರೆ ಎಂಬ ಅಸಮಾಧಾನ ಕೇಳಿ ಬರುತ್ತದೆ. ಹೀಗಾಗಿ ಹೆಚ್ಚಿನ ದರ ವಸೂಲಿಗೆ ಕಡಿವಾಣ ಹಾಕಲು ಸಾರಿಗೆ ಇಲಾಖೆ ಐದು ದಿನಗಳ ಕಾಲ ವಿಶೇಷ ತಪಾಸಣಾ ಕಾರ್ಯಾಚರಣೆ ಕೈಗೊಂಡಿದೆ.

ಈ ಬಗ್ಗೆ ರಾಜ್ಯದ ಎಲ್ಲ ಜಂಟಿ ಸಾರಿಗೆ ಆಯುಕ್ತರಿಗೆ ಸೂಚನೆ ನೀಡಿರುವ ಸಾರಿಗೆ ಆಯುಕ್ತರು, ಸೆ.11ರಿಂದ 15ರವರೆಗೆ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸ ಬೇಕು. ಪ್ರತಿದಿನ ಬೆಳಗ್ಗೆ 10 ಗಂಟೆಯೊಳಗೆ ಹಿಂದಿನ ದಿನದ ಕಾರ್ಯಾಚರಣೆ ವೇಳೆ ಖಾಸಗಿ ಬಸ್‌ಗಳಿಂದಾಗಿರುವ ನಿಯಮ ಉಲ್ಲಂಘನೆ ಕುರಿತು ವರದಿ ನೀಡಬೇಕು ಎಂದು ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜತೆಗೆ ಸೆ.16ರಂದು ಐದು ದಿನಗಳ ತಪಾಸಣೆ ವೇಳೆ ನಿಯಮ ಉಲ್ಲಂಘಿಸಿದ, ಪ್ರಯಾಣಿಕರಿಂದ ವಿಪರೀತ ಪ್ರಯಾಣ ದರ ವಸೂಲಿ ಮಾಡಿದ ವಾಹನಗಳ ವಿರುದ್ಧ ಕೈಗೊಳ್ಳಲಾದ ವಿವರ ನೀಡಬೇಕು ಎಂದು ಸೂಚಿಸಲಾಗಿದೆ. ಅಲ್ಲದೆ, ಕಾರ್ಯಾಚರಣೆ ವೇಳೆ ನಿಯಮ ಉಲ್ಲಂಘಿಸಿದ ವಾಹನಗಳ ಜಪ್ತಿ, ದುಬಾರಿ ದಂಡ ವಿಧಿಸಿ ಕ್ರಮ ಕೈಗೊಳ್ಳುವಂತೆಯೂ ತಿಳಿಸಿದ್ದಾರೆ.

ಸಾರಿಗೆ ಆಯುಕ್ತರ ಸೂಚನೆ

ಗೌರಿ ಗಣೇಶ ಹಬ್ಬದ ಪ್ರಯುಕ್ತ ಪ್ರಯಾಣ ದರಗಳನ್ನು ಹೆಚ್ಚಳ ಮಾಡಿ ಸಂಚರಿಸುವ ವಾಹನಗಳ ವಿರುದ್ಧ ದಿನಾಂಕ: 11-09-2026 ರಿಂದ 15-09-2026 ರವರೆಗೆ ವಿಶೇಷ ಪ್ರವರ್ತನ ಕಾರ್ಯ ನಡೆಸುವ ಕುರಿತು.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಗೌರಿ ಗಣೇಶ ಹಬ್ಬದ ಹಿನ್ನಲೆಯಲ್ಲಿ ಮುಂಬರುವ ಸರದಿ ಹಬ್ಬ ಹರಿದಿನಗಳಲ್ಲಿ ಖಾಸಗಿ ಪ್ರಯಾಣಿಕರ ವಾಹನಗಳ ಮಾಲೀಕರುಗಳು ಪ್ರಯಾಣ ದರಗಳಲ್ಲಿ ವಿಪರೀತ ಹೆಚ್ಚಳ ಮಾಡುವುದರಿಂದ ಪ್ರಯಾಣಿಕರಿಗಾಗುವ ಅನಾನುಕೂಲತೆ ತಪ್ಪಿಸಲು ಹಾಗೂ ಪ್ರಯಾಣಿಕರ ವಾಹನಗಳಲ್ಲಿ ನಿಗದಿಗಿಂತ ಅಧಿಕ ಸಂಖ್ಯೆಯಲ್ಲಿ ಜನರನ್ನು ತುಂಬಿಕೊಂಡು ಸಂಚರಿಸುವ ಹಾಗೂ ಸದರಿ ವಾಹನಗಳಲ್ಲಿ ಸರಕು/ಸ್ಪೋಟಕ ಸಾಮಾಗ್ರಿಗಳನ್ನು ಹೇರಿಕೊಂಡು ರಹದಾರಿ ನಿಯಮಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಸಂಚರಿಸುತ್ತಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ದಿನಾಂಕ: 11-09-2026 0 15-09-2026 ಹಮ್ಮಿಕೊಳ್ಳಲು ಸೂಚಿಸಿದೆ.

ಈ ಕುರಿತಂತೆ ಕೆಳಕಂಡ ನಮೂನೆಯಲ್ಲಿ ಪ್ರತಿದಿನ ಬೆಳಗ್ಗೆ 10 ಗಂಟೆಗೆ ವರದಿಯನ್ನು ಕಳುಹಿಸಿ ಕೊಡಲು ತಿಳಿಸುತ್ತಾ, ದಿನಾಂಕ 16-09-2026 ರಂದು ಈ ಕುರಿತು ಕೈಗೊಂಡ ವಿಶೇಷ ತಪಾಸಣಾ ವಿವರಗಳ ಕ್ರೋಡೀಕೃತ ಮಾಹಿತಿಯನ್ನು ತಪ್ಪದೆ ಈ ಕಛೇರಿಗೆ ಕಳುಹಿಸಲು ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular