HomeKarnatakaಮಹಿಳೆಯರಿಗೆ ಗುಡ್ ನ್ಯೂಸ್: ಗ್ಯಾರಂಟಿ ಸ್ಕೀಂ ಅನ್ವಯ ಉಚಿತ ಬಸ್ ಪಾಸ್ ನೀಡುವ ಬಗ್ಗೆ ನಾಳೆ...

ಮಹಿಳೆಯರಿಗೆ ಗುಡ್ ನ್ಯೂಸ್: ಗ್ಯಾರಂಟಿ ಸ್ಕೀಂ ಅನ್ವಯ ಉಚಿತ ಬಸ್ ಪಾಸ್ ನೀಡುವ ಬಗ್ಗೆ ನಾಳೆ ಮಹತ್ವದ ಸಭೆ

ಬೆಂಗಳೂರು: ಮಹಿಳೆಯರಿಗೆ ಉಚಿತ ಸಂಬಂಧ ನಾಳೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗುವುದು.

ಬೆಂಗಳೂರಿನ ಶಾಂತಿನಗರದ ಕೆಎಸ್ಆರ್ಟಿಸಿ ಕಚೇರಿಯಲ್ಲಿ ಸಭೆ ನಡೆಯಲಿದೆ. ನಾಲ್ಕು ನಿಗಮಗಳ ಬಸ್ ಪಾಸ್ ಸಬ್ಸಿಡಿ ಬಗ್ಗೆ ಸಚಿವರು ನಿರ್ಧರಿಸಲಿದ್ದಾರೆ. ನಾಳೆ ಮಧ್ಯಾಹ್ನ 1 ಗಂಟೆಗೆ ಸಾರಿಗೆ ಇಲಾಖೆಯ 4 ನಿಗಮಗಳ ಸಭೆ ನಡೆಸಲಿದ್ದು, ಸಭೆಯಲ್ಲಿ ನಾಲ್ಕು ನಿಗಮಗಳಿಗೆ ಬಸ್ ಪಾಸ್ ಸಬ್ಸಿಡಿ ಬಗ್ಗೆ ಸಚಿವರು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಗಮಗಳ ಆದಾಯದಲ್ಲಿ ಉಚಿತ ಬಸ್ ಪಾಸ್ ನೀಡಲು ಸಾಧ್ಯವಿಲ್ಲ. ಸರ್ಕಾರದ ಯೋಜನೆಯಾಗಿದ್ದರಿಂದ ನಿಗಮಗಳಿಂದ ಹಣ ಭರಿಸಲು ಆಗಲ್ಲ ಎಂದು ಈಗಾಗಲೇ ಮುಖ್ಯಮಂತ್ರಿಗಳ ಗಮನಕ್ಕೆ ಸಾರಿಗೆ ಸಚಿವರು ಮತ್ತು ಅಧಿಕಾರಿಗಳು ಈ ವಿಷಯ ತಂದಿದ್ದಾರೆ. ನಾಳೆ 4 ಸಾರಿಗೆ ನಿಗಮಗಳ ಹಣಕಾಸಿನ ಸ್ಥಿತಿಯನ್ನು ಸಚಿವರು ಅವಲೋಕಿಸಲಿದ್ದಾರೆ. ನಂತರ ಬಸ್ ಪಾಸ್ ಬಗ್ಗೆ ತೀರ್ಮಾನಿಸಲಾಗುವುದು ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular