HomeKarnatakaಕಾರವಾರ-ಬೆಂಗಳೂರು ನಡುವೆ ನೂತನ ಪಲ್ಲಕ್ಕಿ ಸ್ಲೀಪರ್ ಬಸ್

ಕಾರವಾರ-ಬೆಂಗಳೂರು ನಡುವೆ ನೂತನ ಪಲ್ಲಕ್ಕಿ ಸ್ಲೀಪರ್ ಬಸ್

ಕಾರವಾರ-ಬೆಂಗಳೂರು ನಡುವಿನ ನೂತನ ಪಲ್ಲಕ್ಕಿ ಸ್ಲೀಪರ್ ನಾನ್ ಎಸಿ ಬಸ್‌ಗಳ ಸಂಚಾರಕ್ಕೆ ಕಾರವಾರ ಬಸ್ ನಿಲ್ದಾಣದಲ್ಲಿ ಎಸಿಎ ಅಧ್ಯಕ್ಷ ಹಾಗೂ ಕಾರವಾರ ಶಾಸಕ ಸತೀಶ್ ಸೈಲ್ ಚಾಲನೆ ನೀಡಿದರು.

ಶಾಸಕರು ಮಾತನಾಡಿ, “ಕಾರವಾರ ಜನತೆಯ ಬಹು ನಿರೀಕ್ಷೆಯಂತೆ ಬೆಂಗಳೂರು ನಗರಕ್ಕೆ ಸುಸಜ್ಜಿತ ಸರ್ಕಾರಿ ಬಸ್ ಸೌಲಭ್ಯವನ್ನು ಒದಗಿಸಲಾಗಿದ್ದು, ಇನ್ನು 2 ಹೆಚ್ಚುವರಿ ಪಲ್ಲಕ್ಕಿ ಬಸ್‌ಗಳನ್ನು ಮತ್ತು ಮಲ್ಟಿ ಆಕ್ಸೆಲ್ ವೋಲ್ವೋ ಬಸ್ ಸೌಲಭ್ಯ ಒದಗಿಸಲಾಗುವುದು” ಎಂದರು.

“ಇತ್ತೀಚೆಗಷ್ಟೇ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಉದ್ಘಾಟಿಸಿದ ನೂತನ ಸೇತುವೆಯ ಮುಖಾಂತರ ಈ ಬಸ್ ಸಂಚರಿಸಲಿದೆ. ಕಾರವಾರಕ್ಕೆ 15 ಹೊಸ ಬಸ್ ಬಂದಿದೆ. ಈ ನೂತನ ಬಸ್ ಸೌಕರ್ಯವನ್ನು ಒದಗಿಸಿದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಶಕ್ತಿ ಯೋಜನೆಯು ಸಾರಿಗೆ ಸಂಸ್ಥಗೆ ಆರ್ಥಿಕ ಶಕ್ತಿ ಒದಗಿಸಿದ್ದು, ಈ ವರ್ಷ ವಾಯುವ್ಯ ಕರ್ನಾಟಕ ಸಾರಿಗೆಯ ಉತ್ತರ ಕನ್ನಡ ವಿಭಾಗ 13 ಕೋಟಿ ಲಾಭವಾಗಿದೆ.‌ ಇದಕ್ಕೆ ಮುಖ್ಯ ಕಾರಣ ಸಂಸ್ಥೆಯ ಚಾಲಕ‌, ನಿರ್ವಾಹಕರು” ಎಂದು ತಿಳಿಸಿದರು.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ ಯೋಜನೆ’ಯ ಕುರಿತು ಮಾತನಾಡಿ, “ಸಾರಿಗೆ ಸಂಸ್ಥೆಗಳು ನಷ್ಟದಲ್ಲಿವೆ” ಎಂಬ ಆರೋಪಗಳನ್ನು ತಳ್ಳಿ ಹಾಕಿದರು.

“ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆ ನಷ್ಟದಲ್ಲಿದೆ ಎಂದು ಹಲವರು ಹೇಳುತ್ತಿದ್ದರು. ಆದರೆ ನಮ್ಮ ಶಿರಸಿ ವಿಭಾಗವು ಈ ವರ್ಷ ಬರೋಬ್ಬರಿ 13 ಕೋಟಿ ರೂಪಾಯಿಗಳ ಲಾಭವನ್ನು ಗಳಿಸಿದೆ” ಎಂದರು.

“ಈ ಸಾಧನೆಗೆ ಶ್ರಮವಹಿಸಿ ಕೆಲಸ ಮಾಡಿದ ವಿಭಾಗೀಯ ಅಧಿಕಾರಿಗಳು, ಮ್ಯಾನೇಜರ್ ಹಾಗೂ ವಿಶೇಷವಾಗಿ ಚಾಲಕರು ಮತ್ತು ನಿರ್ವಾಹಕರು ಕಾರಣೀಕರ್ತರು” ಎಂದು ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.

“ಸರ್ಕಾರವು ಬಡಜನರಿಗಾಗಿ ಉಚಿತ ಯೋಜನೆಗಳನ್ನು ನೀಡಿದ್ದು, ನುಡಿದಂತೆ ನಡೆದಿದೆ ಮತ್ತು ಕೊಟ್ಟ ಆಶ್ವಾಸನೆಯಿಂದ ಹಿಂದೆ ಸರಿಯುವುದಿಲ್ಲ” ಎಂದು ಶಾಸಕರು ಸ್ಪಷ್ಟಪಡಿಸಿದರು.

ಇದೇ ವೇಳೆ ಉಚಿತ ಪ್ರಯಾಣದ ಕುರಿತು ಮಾತನಾಡಿದ ಅವರು, “ಮಹಿಳಾ ಅಧಿಕಾರಿಗಳು ಅಥವಾ ಆರ್ಥಿಕವಾಗಿ ಸಬಲರಾಗಿರುವ ಮಹಿಳೆಯರು ಇಚ್ಛಿಸಿದರೆ ಸ್ವಯಂಪ್ರೇರಿತರಾಗಿ ಟಿಕೆಟ್ ಖರೀದಿಸಿ ಪ್ರಯಾಣಿಸಬಹುದು. ಇದಕ್ಕೆ ಯಾವುದೇ ನಿರ್ಬಂಧವಿಲ್ಲ, ಆರ್ಥಿಕವಾಗಿ ಶಕ್ತರಾದವರು ಟಿಕೆಟ್ ಪಡೆದು ಹೋಗಲು ಮುಕ್ತ ಅವಕಾಶವಿದೆ” ಎಂದು ತಿಳಿಸಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular