ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ದೇವಾಲಯಕ್ಕೆ ಪ್ರವಾಸ ಹೋಗುವ ಭಕ್ತರಿಗೆ ಗುಡ್‌ನ್ಯೂಸ್. ಕೆಎಸ್ಆರ್‌ಟಿಸಿ ಬೆಂಗಳೂರು-ಧರ್ಮಸ್ಥಳ ನಡುವೆ ನಾನ್ ಎಸಿ ಸ್ಲೀಪರ್ ಬಸ್ ಸೇವೆಯನ್ನು ಆರಂಭಿಸಿದೆ.
ಬೆಂಗಳೂರಿನ ಕೆಎಸ್ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನೂತನ 70 ಹವಾನಿಯಂತ್ರಣ ರಹಿತ ಸ್ಲೀಪರ್ ಪಲ್ಲಕ್ಕಿ ಬಸ್ ಹಾಗೂ 45 ಕರ್ನಾಟಕ ಸಾರಿಗೆ ಬಸ್‌ಗಳಿಗೆ ಚಾಲನೆ ನೀಡಿದರು.
ನಿಗಮಕ್ಕೆ ಒಟ್ಟು 805 ಸಂಖ್ಯೆಯ ಹೊಸ ಕರ್ನಾಟಕ ಸಾರಿಗೆ ಹಾಗೂ ನಗರ/ ಗ್ರಾಮಾಂತರ ಸಾರಿಗೆ ವಾಹನಗಳು ಏಪ್ರಿಲ್, ಮೇ ಮತ್ತು ಜೂನ್ 2026ರಲ್ಲಿ ಸೇರ್ಪಡೆಗೊಳ್ಳಲಿದೆ ಎಂದು ಸಚಿವರು ಹೇಳಿದರು.
ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್: ಕೆಎಸ್ಆರ್‌ಟಿಸಿ ಆರಂಭಿಸಿರುವ ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್ ಸೇವೆಗೆ ಭಾರೀ ಬೇಡಿಕೆ ಇದೆ. ಆದ್ದರಿಂದ ಹೊಸ ಮಾರ್ಗದಲ್ಲಿ ಈ ಮಾದರಿ ಬಸ್ ಸೇವೆಯನ್ನು ಪ್ರಾರಂಭಿಸಲಾಗಿದೆ.
ಪಲ್ಲಕ್ಕಿ ಬಸ್‌ಗಳನ್ನು ಉಡುಪಿ, ಮಂಗಳೂರು, ಮೈಸೂರು, ಧರ್ಮಸ್ಥಳ, ಶೃಂಗೇರಿ, ಹೊರನಾಡು, ಆಗುಂಬೆ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಂಪಿ, ರಾಯಚೂರು, ಜಮಖಂಡಿ, ಪುತ್ತೂರು, ಕಾಣಿಯೂರು, ಕುಕ್ಕೆ ಸುಬ್ರಹ್ಮಣ್ಯ, ಕಾಸರಗೋಡು, ಮಂತ್ರಾಲಯ, ತಿರುಚಿ, ಕೊಜಿಕ್ಕೋಡ್, ಮುನ್ನಾರ್, ಪಾಂಡಿಚೇರಿ, ತಂಜಾವೂರು, ಕೊಟ್ಟಾಯಂ, ಹೈದಾರಬಾದ್, ಚೆನ್ನೈ, ಪಣಜಿ, ಮಧುರೈ, ಕುಂಭಕೋಣಂ, ಎರ್ನಾಕುಲಂಗೆ ಓಡಿಸಲಾಗುತ್ತದೆ.
70 ಹೊಸ ಪಲ್ಲಕ್ಕಿ ಬಸ್‌ಗಳ ಪೈಕಿ ಬೆಂಗಳೂರು-ಧರ್ಮಸ್ಥಳ ಮಾರ್ಗದಲ್ಲಿಯೂ ಬಸ್‌ಗಳನ್ನು ಓಡಿಸಲಾಗುತ್ತಿದೆ. ಈ ಬಸ್ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ ನೀಡಿದ್ದಾರೆ.

