HomeKarnatakaಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಜ. 5ರಿಂದ ಸಾರಿಗೆ ಬಸ್ ಟಿಕೆಟ್ ಪರಿಷ್ಕೃತ ದರ ಜಾರಿ, ಖಾಸಗಿ...

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಜ. 5ರಿಂದ ಸಾರಿಗೆ ಬಸ್ ಟಿಕೆಟ್ ಪರಿಷ್ಕೃತ ದರ ಜಾರಿ, ಖಾಸಗಿ ಬಸ್ ಟಿಕೆಟ್ ದರವೂ ಹೆಚ್ಚಳ

ಬೆಂಗಳೂರು: ಬಿಎಂಟಿಸಿ, ಕೆಎಸ್ಆರ್ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ಪ್ರಯಾಣ ದರವನ್ನು ಶೇಕಡ 15ರಷ್ಟು ಏರಿಕೆ ಮಾಡಲಾಗಿದೆ. ಜನವರಿ 5 ರಿಂದ ಪರಿಷ್ಕೃತ ಟಿಕೇಟ್ ದರ ಜಾರಿಗೆ ಬರಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಶೇಕಡ 15ರಷ್ಟು ಬಸ್ ಟಿಕೆಟ್ ದರ ಹೆಚ್ಚಳಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಕಳೆದ 5-10 ವರ್ಷಗಳಿಂದ ಟಿಕೆಟ್ ದರ ಹೆಚ್ಚಳ ಮಾಡಿರಲಿಲ್ಲ. ಡೀಸೆಲ್ ದರ ಹೆಚ್ಚಳ, ಸಿಬ್ಬಂದಿ ವೇತನ ಏರಿಕೆ, ಬಿಡಿ ಭಾಗಗಳ ದರ ಹೆಚ್ಚಳದಿಂದಾಗಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ. ಜನವರಿ 5 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಸಾರಿಗೆ ಬಸ್ ಗಳ ದರ ಏರಿಕೆಯಾಗುತ್ತಿದ್ದಂತೆ ಖಾಸಗಿ ಬಸ್ ಗಳಲ್ಲಿಯೂ ಪ್ರಯಾಣ ದರ ಏರಿಕೆ ಮಾಡಲು ಖಾಸಗಿ ಬಸ್ ಗಳ ಮಾಲೀಕರು ಚಿಂತನೆ ನಡೆಸಿದ್ದಾರೆ. ಖಾಸಗಿ ಬಸ್ ಮಾಲೀಕರು ಕೂಡ ಶೇಕಡ 15ರಷ್ಟು ಟಿಕೆಟ್ ಚರ್ಚೆ ನಡೆಸಿದ್ದು, ಶೀಘ್ರವೇ ಜಾರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular