ಅ. 5 ರಂದು ರಾಜ್ಯದ ಎಲ್ಲಾ ಸಾರಿಗೆ ನಿಗಮಗಳ ನೌಕರರ ಪ್ರತಿಭಟನೆ: ಬಸ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು: ವೇತನ ಹಿಂಬಾಕಿ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದ ಎಲ್ಲಾ ಸಾರಿಗೆ ನಿಗಮಗಳ ನೌಕರರು ಅಕ್ಟೋಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಕೆ.ಎಸ್.ಆರ್.ಟಿ.ಸಿ. ನಿಗಮಗಳ ಒಕ್ಕೂಟದ(CITU) ಅಧ್ಯಕ್ಷ ಹೆಚ್.ಡಿ. ರೇವಪ್ಪ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. 2020 ಜನವರಿ 1ರ ನಂತರ ವೇತನವನ್ನು ಶೇಕಡ 15 ರಷ್ಟು ಹೆಚ್ಚಳ ಮಾಡಿದ್ದು, ಪರಿಷ್ಕೃತ ಹಿಂಬಾಕಿಯನ್ನು ಪಾವತಿಸಬೇಕು. ಎಲೆಕ್ಟ್ರಿಕ್ ಬಸ್ ಗಳಿಗೆ ನಮ್ಮ ನೌಕರರೇ ಚಾಲಕರಾಗಬೇಕು. ಈ ಹಿಂದೆ ಪ್ರತಿಭಟನೆ ನಡೆಸಿದಾಗ ವಜಾಗೊಳಿಸಿದ್ದ ಎಲ್ಲಾ ನೌಕರರನ್ನು ವಾಪಸ್ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ನಾಲ್ಕು ನಿಗಮಗಳ ನೌಕರರು ಅಕ್ಟೋಬರ್ 5ರಂದು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಅ. 5 ರಂದು ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read