ಫೆಬ್ರವರಿ ಒಳಗೆ 5500 ಬಸ್, 9000 ಕಂಡಕ್ಟರ್, ಮೆಕಾನಿಕ್ ಹುದ್ದೆಗಳ ಭರ್ತಿ: ರಾಮಲಿಂಗಾರೆಡ್ಡಿ

ಬೆಳಗಾವಿ(ಸುವರ್ಣಸೌಧ): ಮುಂದಿನ ಮೂರು ತಿಂಗಳಲ್ಲಿ ಸಾರಿಗೆ ನಿಗಮಗಳಿಗೆ ಹೊಸದಾಗಿ 5,500 ಬಸ್ ಸೇರ್ಪಡೆ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ವಿಧಾನಪರಿಷತ್ ನಲ್ಲಿ ಬಿಜೆಪಿ ಸದಸ್ಯ ಶಶಿಲ್ ನಮೋಶಿ, ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಅವರು ಕೇಳಿದ ಪ್ರತ್ಯೇಕ ಪ್ರಶ್ನೆಗಳಿಗೆ ಸಚಿವರು ಉತ್ತರ ನೀಡಿ, ಮುಂದಿನ ವರ್ಷದ ಫೆಬ್ರವರಿ ಒಳಗೆ ಸಾರಿಗೆ ನಿಗಮಗಳಿಗೆ 5,500 ಬಸ್ ಸೇರ್ಪಡೆ ಮಾಡಲಾಗುವುದು. 9000 ಕಂಡಕ್ಟರ್, ಮೆಕಾನಿಕ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಈಗಿರುವ ಜನಸಂಖ್ಯೆಗೆ ಹೋಲಿಸಿದರೆ 35000 ಬಸ್ ಗಳನ್ನು ಸಾರಿಗೆ ನಿಗಮ ಹೊಂದಿರಬೇಕಿತ್ತು. ಆದರೆ ಕೇವಲ 23,000 ಬಸ್ ಗಳು ಇವೆ. ಕಳೆದ ನಾಲ್ಕು ವರ್ಷಗಳಲ್ಲಿ ಹೊಸ ಬಸ್ ಖರೀದಿಸಿಲ್ಲ. 13 ಸಾವಿರಕ್ಕೂ ಅಧಿಕ ಸಿಬ್ಬಂದಿ ನಿವೃತ್ತರಾದರೂ 7 ವರ್ಷಗಳಲ್ಲಿ ಹೊಸ ನೇಮಕಾತಿ ನಡೆದಿಲ್ಲ. ಹೀಗಾಗಿ ಅನೇಕ ಮಾರ್ಗಗಳ ಬಸ್ ಸಂಚಾರ ರದ್ದು ಮಾಡಲಾಗಿದೆ. ತಾವು ಸಚಿವರಾದ ನಂತರ ಹೊಸ ಬಸ್ ಗಳ ಖರೀದಿ, ಹೊಸ ನೇಮಕಾತಿ ಕೈಗೊಳ್ಳಲಾಗಿದೆ. ಫೆಬ್ರವರಿ ಬಳಿಕ ವ್ಯವಸ್ಥೆಯಲ್ಲಿ ಸುಧಾರಣೆಯಾಗಲಿದೆ ಎಂದು ತಿಳಿಸಿದ್ದಾರೆ.

ಶಕ್ತಿ ಯೋಜನೆಯಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆ ತಕ್ಕಂತೆ ಬಸ್ ನಿಲ್ದಾಣಗಳಲ್ಲಿ ಶೌಚಾಲಯ ಸೇರಿ ಮೂಲ ಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read