ವರ್ಗಾವಣೆ ನಿರೀಕ್ಷೆಯಲ್ಲಿದ್ದ KSRTC ನೌಕರರಿಗೆ ಶುಭ ಸುದ್ದಿ: ಅಂತರ ನಿಗಮ ವರ್ಗಾವಣೆಗೆ ಅರ್ಹರ ಪಟ್ಟಿ ಪ್ರಕಟ

ಬೆಂಗಳೂರು: ಕೆಎಸ್ಆರ್ಟಿಸಿ ಅಂತರ ನಿಗಮ ವರ್ಗಾವಣೆಗೆ ಸಂಬಂಧಿಸಿದಂತೆ 1308 ಅರ್ಹ ನೌಕರರ ಪಟ್ಟಿಯನ್ನು ಕೆಎಸ್ಆರ್ಟಿಸಿ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಕೆಎಸ್ಆರ್ಟಿಸಿ ದರ್ಜೆ 3 ಮೇಲ್ವಿಚಾರಕೇತರ ಮತ್ತು ದರ್ಜೆ 4 ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಕಳೆದ ಡಿಸೆಂಬರ್ ನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ನೌಕರರಲ್ಲಿ ಅಂತರ ನಿಗಮ ವರ್ಗಾವಣೆಯ ನಿಯಮದಂತೆ ಸೂಕ್ತ ಕಾರಣಗಳಿರುವ 1308 ನೌಕರರ ಅಂತರ ನಿಗಮ ವರ್ಗಾವಣೆ ಕೋರಿಕೆಯನ್ನು ಪುರಸ್ಕರಿಸಲಾಗಿದೆ.

www.ksrrc.karnataka.gov.in ವೆಬ್ಸೈಟ್ ನಲ್ಲಿ ವರ್ಗಾವಣೆಯಾಗಲಿರುವ ನೌಕರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಆಕ್ಷೇಪಣೆಗಳು ಇದ್ದಲ್ಲಿ ಡಿಸೆಂಬರ್ 4ರಂದು ಸಂಜೆ 5:30ರೊಳಗೆ ಸಂಬಂಧಿಸಿದ ವಿಭಾಗದ ಆಡಳಿತ ಅಧಿಕಾರಿಗಳಿಗೆ ಲಿಖಿತವಾಗಿ ಸಲ್ಲಿಸುವಂತೆ ತಿಳಿಸಲಾಗಿದೆ. ಈ ಮೂಲಕ 1308 ಕೆಎಸ್ಆರ್ಟಿಸಿ ನೌಕರರಿಗೆ ಅಂತರ ನಿಗಮ ವರ್ಗಾವಣೆ ಭಾಗ್ಯ ಸಿಕ್ಕಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read