HomeKarnatakaವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್ ಅವಧಿ ವಿಸ್ತರಣೆ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಲಾಗಿದೆ. 2022 -23ನೇ ಸಾಲಿನ ಮಾರ್ಚ್ ಅಂತ್ಯದವರೆಗೆ ಬಸ್ ಪಾಸ್ ಪಡೆದುಕೊಂಡಿರುವ ಪದವಿ, ಸ್ನಾತಕೋತ್ತರ ಪದವಿ, ಬಿ ಫಾರ್ಮ್, ಡಿಪ್ಲೊಮಾ ಮೊದಲಾದ ಕೋರ್ಸುಗಳ ವಿದ್ಯಾರ್ಥಿಗಳಿಗೆ ಜುಲೈ ಅಂತ್ಯದವರೆಗೆ ಪರೀಕ್ಷೆಗಳು ಇರುವ ಕಾರಣ ಈ ವಿದ್ಯಾರ್ಥಿಗಳಿಗೆ ಮಾತ್ರ ಎರಡು ತಿಂಗಳ ಅವಧಿಗೆ ಬಸ್ ಪಾಸ್ ವಿಸ್ತರಿಸಿ ಪ್ರಯಾಣಿಸಲು ಕೆಎಸ್ಆರ್ಟಿಸಿ ಅವಕಾಶ ಕಲ್ಪಿಸಿದೆ.

ಕೆಲವು ವಿದ್ಯಾರ್ಥಿಗಳ ಪಾಸ್ ಗಳು ಏಪ್ರಿಲ್ 2023ರ ವರೆಗೆ ಚಾಲ್ತಿಯಲ್ಲಿತ್ತು. ಬಸ್ ಪಾಸ್ ಅವಧಿ ವಿಸ್ತರಿಸುವಂತೆ ವಿದ್ಯಾರ್ಥಿಗಳು ಬೇಡಿಕೆ ಸಲ್ಲಿಸಿದ್ದರು. ಈ ವಿದ್ಯಾರ್ಥಿಗಳ ಪರೀಕ್ಷಾ ವೇಳಾಪಟ್ಟಿ ಖಚಿತಪಡಿಸಿಕೊಂಡು ನಿಯಮಾನಸಾರ ಹಣ ಪಾವತಿಸಿಕೊಂಡು ರಶೀದಿ ನೀಡಿ ಬಸ್ ಪಾಸ್ ಅವಧಿಯನ್ನು ವಿಶೇಷವಾಗಿ ಒಂದು ಅಥವಾ ಎರಡು ತಿಂಗಳ ಕಾಲ ವಿಸ್ತರಿಸಬೇಕು. ಈ ವಿದ್ಯಾರ್ಥಿಗಳು ಪ್ರಯಾಣಿಸುವಾಗ ಶುಲ್ಕ ಪಾವತಿ ರಶೀದಿ ಮತ್ತು 2022 -23ನೇ ಸಾಲಿನ ಬಸ್ ಪಾಸ್ ತೋರಿಸಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೆಎಸ್ಆರ್ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular