HomeLatest Newsರಸ್ತೆಯಲ್ಲಿ ಸಿಕ್ಕ ಚಿನ್ನದ ಸರ: ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಬಸ್ ಚಾಲಕ

ರಸ್ತೆಯಲ್ಲಿ ಸಿಕ್ಕ ಚಿನ್ನದ ಸರ: ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಬಸ್ ಚಾಲಕ

ಹಾಸನ: ಕೆ.ಎಸ್.ಆರ್ .ಟಿ.ಸಿ ಬಸ್ ಚಾಲಕರೊಬ್ಬರು ತಮಗೆ ರಸ್ತೆಯಲ್ಲಿ ಸಿಕ್ಕ ಚಿನ್ನದ ಸರವನ್ನು ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ.

ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಧರ್ಮ ಎಂಬುವವರಿಗೆ ರಸ್ತೆಯಲ್ಲಿ 38 ಗ್ರಾಂ ಚಿನ್ನದ ಮಾಂಗಲ್ಯ ಸರ ಸಿಕ್ಕಿತ್ತು. ಧರ್ಮ ಅವರು ಕರ್ತವ್ಯ ನಿರ್ವಹಿಸಿ ಮನೆಗೆ ತೆರಳುತ್ತಿದ್ದಾಗ ಹಾಸನದ ಚಿಟ್ಟನಹಳ್ಳಿ ಬಡಾವಣೆಯಲ್ಲಿರುವ ನರ್ಸಿಂಗ್ ಕಾಲೇಜು ರಸ್ತೆಯಲ್ಲಿ ಚಿನ್ನದ ಮಾಂಗಲ್ಯ ಸರ ಸಿಕ್ಕಿತ್ತು.

ಅದನ್ನು ತೆಗೆದುಕೊಂಡು ಬಂದಿದ್ದರು. ಕೆಲ ಸಮಯದ ಬಳಿಕ ಅದೇ ರಸ್ತೆಯಲ್ಲಿ ಸರ ಕಳೆದುಕೊಂಡಿದ್ದ ಮಹಿಳೆ ಹಾಗೂ ಕುಟುಂಬದವರು ಸರ ಹುಡುಕುತ್ತಿರುವುದನ್ನು ಗಮನಿಸಿದ್ದರು. ಈ ಬಗ್ಗೆ ಧರ್ಮ ಅವರು ಸ್ಥಳಕ್ಕಾಗಮಿಸಿ ಮಹಿಳೆ ಹಾಗೂ ಕುಟುಂಬದವರನ್ನು ವಿಚಾರಿಸಿದ್ದಾರೆ. ಕಳೆದುಕೊಂಡ ಸರ ಹಾಗೂ ಒಡವೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ತನಗೆ ಸಿಕ್ಕಿರುವ ಸರ ಅವರದ್ದು ಎಂಬ ಬಗ್ಗೆ ಸೂಕ್ತ ಮಾಹಿತಿ ಪಡೆದು ಕೆ.ಎಂ.ಎಫ್ ಘಟಕವೊಂದರ ವ್ಯವಸ್ಥಾಪಕ ದಿನೇಶ್ ಅವರ ಸಮ್ಮುಖದಲ್ಲಿ ಮಹಿಳೆಗೆ ಸರವನ್ನು ಹಸ್ತಾಂತರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಸ್ ಚಾಲಕನ ಪ್ರಾಮಾಣಿಕತೆಗೆ ಮಹಿಳೆಯ ಕುಟುಂಬ ಹಾಗೂ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಸ್ ಚಾಲಕ ಧರ್ಮ ಅವರು ಅತ್ಯುತ್ತಮ ಚಾಲಕ ಎಂಬ ಪ್ರಶಸ್ತಿಯನ್ನು ಪಡೆದಿದ್ದಾರೆ. ಚಾಲಕ ಧರ್ಮ ಅವರ ಪ್ರಾಮಾಣಿಕತೆ ನಿಜಕ್ಕೂ ಮೆಚ್ಚಲೇಬೇಕು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular