ಬೆಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿ ಶಂಕಿತ ಉಗ್ರರನ್ನು ಇಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿರುವ ಶಂಕಿತ ಉಗ್ರರ ವಿಚಾರಣೆ ನಡೆಸಲಾಗಿದೆ. ಆರೋಪಿಗಳಿಗೆ ಅಕ್ರಮ ಹಣ ಸಂದಾಯವಾಗಿರುವ ಬಗ್ಗೆ ಇಡಿ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಶಾರಿಕ್ ಸೇರಿದಂತೆ ಪ್ರಕರಣದ ಇನ್ನಿತರ ಆರೋಪಿಗಳ ವಿಚಾರಣೆ ನಡೆಸಲಾಗಿದೆ.
ವಿದೇಶದಿಂದ ಆರೋಪಿಗಳಿಗೆ ಹಣ ಸಂದಾಯವಾಗಿರುವ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ. ಇದರ ಭಾಗವಾಗಿ ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಲಾಗಿದೆ.