HomeLatest NewsBIG NEWS: ವರುಣಾರ್ಭಟಕ್ಕೆ ಉಕ್ಕಿ ಹರಿದ ಕುಮಾರಧಾರ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನಘಟ್ಟ ಮುಳುಗಡೆ

BIG NEWS: ವರುಣಾರ್ಭಟಕ್ಕೆ ಉಕ್ಕಿ ಹರಿದ ಕುಮಾರಧಾರ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನಘಟ್ಟ ಮುಳುಗಡೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ವರುಣಾರ್ಭಟ ಹಿನ್ನೆಲೆಅಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಪ್ರಸಿದ್ಧ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಕುಮಾರಾಧಾರ ನದಿ ಉಕ್ಕಿ ಹರಿದಿದೆ. ಕುಕೆ ಸುಬ್ರಹ್ಮಣ್ಯದ
ಸ್ನಾನ ಘಟ್ಟ ಮುಳುಗಡೆಯಾಗಿದೆ.

ಮಳೆ ಅಬ್ಬರದಿಂದಾಗಿ ನದಿ ಹರಿವು ಹೆಚ್ಚಾಗಿದ್ದು, ಭಕ್ತಾದಿಗಳು ಸ್ನಾನಘಟ್ಟದತ್ತ ತೆರಳದಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular