HomeKarnatakaಬಿಜೆಪಿ ಕಾರ್ಯಕರ್ತರನ್ನು ಕಡೆಗಣಿಸಿದ ಕುಮಾರ್ ಬಂಗಾರಪ್ಪ ವಿರುದ್ಧ ನಮೋ ವೇದಿಕೆಯಿಂದ ಬಂಡಾಯ ಅಭ್ಯರ್ಥಿ

ಬಿಜೆಪಿ ಕಾರ್ಯಕರ್ತರನ್ನು ಕಡೆಗಣಿಸಿದ ಕುಮಾರ್ ಬಂಗಾರಪ್ಪ ವಿರುದ್ಧ ನಮೋ ವೇದಿಕೆಯಿಂದ ಬಂಡಾಯ ಅಭ್ಯರ್ಥಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ಕ್ಷೇತ್ರದ ಶಾಸಕ, ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಅವರ ವಿರುದ್ಧ ನಮೋ ವೇದಿಕೆಯಿಂದ ಬಂಡಾಯ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ನಮೋ ವೇದಿಕೆಯ ಅಧ್ಯಕ್ಷ ಪಾಣಿ ರಾಜಪ್ಪ ಮಾಹಿತಿ ನೀಡಿದ್ದಾರೆ.

ಶಾಸಕ ಕುಮಾರ್ ಬಂಗಾರಪ್ಪ ಸ್ವಾಭಿಮಾನಿ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ. ಹೀಗಾಗಿ ನಮೋ ವೇದಿಕೆಯಿಂದ ಬಂಡಾಯ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು. ಐದು ವರ್ಷಗಳ ಕಾಲ ತಮ್ಮ ಗೆಲುವಿಗೆ ಶ್ರಮಿಸಿದ ಮುಖಂಡರು ಕಾರ್ಯಕರ್ತರನ್ನು ಮೂಲೆಗುಂಪು ಮಾಡಿದ ಕುಮಾರ್ ಬಂಗಾರಪ್ಪ ಸರ್ವಾಧಿಕಾರಿ ಧೋರಣೆ ತೋರಿದ್ದಾರೆ. ಅವರ ಧೋರಣೆ ಖಂಡಿಸಿ ಪಕ್ಷದ ವರಿಷ್ಠರ ಗಮನಕ್ಕೆ ತಂದು ಈ ಬಾರಿ ಟಿಕೆಟ್ ನೀಡದಂತೆ ಒತ್ತಾಯಿಸಲಾಗಿತ್ತು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ವಾಭಿಮಾನಿ ಕಾರ್ಯಕರ್ತರ ಅಭಿಪ್ರಾಯ ಧಿಕ್ಕರಿಸಿ ಕುಮಾರ್ ಬಂಗಾರಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ. ನಮ್ಮ ಶಕ್ತಿ ಏನು ಎನ್ನುವುದನ್ನು ಚುನಾವಣೆಯಲ್ಲಿ ತೋರಿಸಲಿದ್ದೇವೆ. ನಮೋ ವೇದಿಕೆಯಿಂದ ಬಂಡಾಯ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular