HomeLatest Newsದೆಹಲಿ ಪ್ರತಿಭಟನೆಗಳ ಹಿಂದೆ ಕಾಣದ ಶಕ್ತಿಗಳ ಕೈವಾಡ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಶಂಕೆ

ದೆಹಲಿ ಪ್ರತಿಭಟನೆಗಳ ಹಿಂದೆ ಕಾಣದ ಶಕ್ತಿಗಳ ಕೈವಾಡ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಶಂಕೆ

ಹಾಸನ-ನವದೆಹಲಿಯಲ್ಲಿ ನಡೆಯುತ್ತಿರುವ ಸಂಘಟಿತ ಪ್ರತಿಭಟನೆಗಳ ಹಿಂದೆ ಕಾಣದ ಶಕ್ತಿಗಳ ಕೈವಾಡ ಇರಬಹುದು ಎಂಬ ಅನುಮಾನವನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ಶ್ರೀರಂಗನಾಥ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ತಮ್ಮ ತಾಯಿ ಶ್ರೀಮತಿ ಚೆನ್ನಮ್ಮ ಅವರ ಸಮಾಧಿಗೆ ತಮ್ಮ ತಂದೆ ಎಚ್ಡಿ ದೇವೇಗೌಡರು ಹಾಗೂ ಕುಟುಂಬಸ್ಥರ ಜೊತೆಗೂಡಿ ಪೂಜೆ ನೆರವೇರಿಸಿದ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.

ಭಾರತದ ಬೆಳವಣಿಗೆ ಕೆಲವರ ಕಣ್ಣು ಕುಕ್ಕಿದೆ

ಅಭಿವೃದ್ಧಿ ವಿಷಯದಲ್ಲಿ ಭಾರತ ಜಗತ್ತಿನಲ್ಲಿಯೇ ವೇಗವಾಗಿ ದಾಪುಗಾಲು ಇಡುತ್ತಿದೆ. ಅಲ್ಲದೆ ಬಲಿಷ್ಠ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲು ಸರ್ವ ರೀತಿಯ ಪ್ರಯತ್ನ ಮಾಡುತ್ತಿದೆ. ಇಂತಹ ಸೂಕ್ಷ್ಮ ಸಂದರ್ಭದಲ್ಲಿ ಭಾರತದ ವಿರುದ್ಧ ಷಡ್ಯಂತ್ರ ನಡೆಯುತ್ತಿರುವ ಶಂಕೆ ವ್ಯಕ್ತಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಉತ್ತಮ ರೀತಿಯಲ್ಲಿ ಬೆಳವಣಿಗೆ ಕಾಣುತ್ತಿದೆ. ತಲಾದಾಯ ಮತ್ತು ಜಿಡಿಪಿಯಲ್ಲಿಯೂ ಭಾರತ ಅಗ್ರ ರಾಷ್ಟ್ರಗಳಿಗೆ ಸಡ್ಡು ಹೊಡೆಯುವ ರೀತಿಯಲ್ಲಿ ಅಭಿವೃದ್ಧಿಯನ್ನು ಸಾಧಿಸುತ್ತಿದೆ. ಇವೆಲ್ಲವೂ ಕೆಲವರ ಕಣ್ಣು ಕುಕ್ಕಿರುವ ಸಾಧ್ಯತೆ ಇದೆ ಎಂದು ಸಚಿವರು ಹೇಳಿದರು.

*ದೇವರೇ ನುಡಿಸಿದ ಮಾತುಗಳನ್ನು ಹೇಳಿದ್ದೇನೆ:*

ಮುಖ್ಯಮಂತ್ರಿ ಹೆಸರು ಹೇಳದ ಬಗ್ಗೆ ಸ್ಪಷ್ಟನೆ

ನಮ್ಮ ತಾಯಿ ಅಂತ್ಯಕ್ರಿಯೆ ಸಂದರ್ಭದಲ್ಲಿ ಗೌರವ ಸಲ್ಲಿಸಲು ಆಗಮಿಸಿದ್ದ ನಾಡಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೆಸರು ಹೇಳಲಿಲ್ಲ ಎಂಬ ಬಗ್ಗೆ ಯಾರೂ ತಪ್ಪು ತಿಳಿಯುವುದು ಬೇಡ. ಆ ಭಾವುಕ ಸಂದರ್ಭದಲ್ಲಿ ನಾನು ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸಿದ್ದೇನೆ. ಮುಖ್ಯವಾಗಿ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಯಾಗಿ ವಿಶೇಷವಾಗಿ ಧನ್ಯವಾದಗಳನ್ನು ಅರ್ಪಿಸಿದ್ದೇನೆ. ಮುಖ್ಯಮಂತ್ರಿಗಳು ಎಂದರೆ ಶಿವಕುಮಾರ್ ಅವರೇ ಅಲ್ಲವೇ. ಅವರ ಹೆಸರನ್ನು ಹೇಳಲಿಲ್ಲ ಎಂದು ಯಾರೂ ಅನ್ಯತಾ ಭಾವಿಸುವುದು ಬೇಡ. ಮುಖ್ಯಮಂತ್ರಿಗಳು ಎಂದು ಅತ್ಯಂತ ಗೌರವದಿಂದ ನಾನು ಅವರನ್ನು ಸಂಭೋಧಿಸಿದ್ದೇನೆ ಎಂದು ಸಚಿವರು ಪ್ರಶ್ನೆ ಒಂದಕ್ಕೆ ಉತ್ತರಿಸಿದರು.

ಆ ಸಂದರ್ಭ ಹೇಗಿತ್ತು ಎಂಬುದನ್ನು ತಾವೆಲ್ಲರೂ ಗಮನಿಸಿದ್ದೀರಿ. ಅಂತಿಮ ದರ್ಶನದ ವೇಳೆ ನಾನು ಮೈಕ್ ಹಿಡಿದು ಮಾತನಾಡಿದೆ. ಮಾತಾಡಬೇಕು ಎಂಬ ಉದ್ದೇಶ ನನಗೆ ಇರಲಿಲ್ಲ. ನನ್ನ ತಾಯಿಯೇ ನನ್ನನ್ನು ಮಾತನಾಡಿಸಿದರು, ಆ ಭಗವಂತನೇ ಆ ಮಾತುಗಳನ್ನು ನುಡಿಸಿದ ಎಂದು ನಂಬಿದ್ದೇನೆ. ನಾನೆಂದೂ ಮುಖ್ಯಮಂತ್ರಿಗಳು ಸೇರಿದಂತೆ ಯಾರನ್ನು ಅಗೌರವಿಸುವ ಪ್ರಶ್ನೆ ಬರುವುದಿಲ್ಲ. ಇದು ನಾನು ಕೊಡುತ್ತಿರುವ ಸ್ಪಷ್ಟನೆ ಎಂದು ತಿಳಿಸಿದರು.

ಜನರ ಪ್ರೀತಿಗೆ ಭಾವುಕರಾದ ಕುಮಾರಸ್ವಾಮಿ

ನಾಡಿನ ಲಕ್ಷಾಂತರ ಜನ ನನ್ನ ತಾಯಿಯ ದರ್ಶನ ಪಡೆದು ಅವರಿಗೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಬೆಂಗಳೂರಿನಿಂದ ಹೊಳೆನರಸೀಪುರಕ್ಕೆ ನಡೆದ ಅಂತಿಮ ಯಾತ್ರೆಯಲ್ಲಿ ಜನತೆ ತೋರಿದ ಪ್ರೀತಿಗೆ ನಾನು ಭಾವುಕನಾಗಿದ್ದೇನೆ. ಕೇವಲ ನಾಲ್ಕು ಗಂಟೆಗಳಲ್ಲಿ ಮುಗಿಯಬೇಕಾಗಿದ್ದ ಅಂತಿಮ ಯಾತ್ರೆ ಸತತ 16 ಗಂಟೆಗಳ ಕಾಲ ಸಾಗಿದ್ದು ನನ್ನನ್ನು ಮೂಕವಿಸ್ಮಿತನನ್ನಾಗಿ ಮಾಡಿದೆ. ಇಂಥ ಜನರ ಋಣ ಭಾರ ನನ್ನ ಮೇಲಿದೆ. ಇವರ ಋಣ ತೀರಿಸುವುದು ನನ್ನ ಜವಾಬ್ದಾರಿ. ಅದಕ್ಕಾಗಿ ಆ ಭಗವಂತ ನನಗೆ ಶಕ್ತಿ ಕೊಡಲಿ ಎಂದು ವಿನಮ್ರತೆಯಿಂದ ಪ್ರಾರ್ಥಿಸುತ್ತೇನೆ. ಜನರ ಸೇವೆ ಮಾಡುವುದೇ ನನ್ನ ಧ್ಯೇಯವಾಗಿದೆ. ನನ್ನ ಹೆತ್ತಮ್ಮನ ಸಮಾಧಿಯ ಮುಂದೆ ಕುಳಿತು ಈ ಮಾತು ಹೇಳುತ್ತಿದ್ದೇನೆ ಎಂದು ಕುಮಾರಸ್ವಾಮಿ ಅವರು ಅತ್ಯಂತ ಭಾವುಕತೆಯಿಂದ ಹೇಳಿದರು.

ಮೂರನೇ ದಿನದ ಕಾರ್ಯಕ್ರಮ ಮತ್ತು ಕುಟುಂಬಸ್ಥರ ಪೂಜೆ

ಅಮ್ಮನು ಸಮಾಧಿಯಾದ ಮೂರನೇ ದಿನವಾದ ಬುಧವಾರ ಹಾಲು, ತುಪ್ಪದ ಕಾರ್ಯಕ್ರಮ ಇರುತ್ತದೆ. ಕುಟುಂಬದ ಸದಸ್ಯರೆಲ್ಲರೂ ಸೇರಿ ಈ ಕಾರ್ಯಕ್ರಮವನ್ನು ನೆರವೇರಿಸುತ್ತೇವೆ ಎಂದು ಸಚಿವರು ಹೇಳಿದರು.

ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು, ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಸೇರಿದಂತೆ ಮಾಜಿ ಪ್ರಧಾನಿಗಳ ಕುಟುಂಬ ಸದಸ್ಯರೆಲ್ಲರೂ ಶ್ರೀಮತಿ ಚೆನ್ನಮ್ಮ ಅವರಿಗೆ ಪೂಜೆ ಸಲ್ಲಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular