ಕುಮಾರಸ್ವಾಮಿಯವರೇ ? ನಿಮ್ಮ ಊಟದೆಲೆಯಲ್ಲಿ ಆನೆ ಸತ್ತು ಬಿದ್ದಿದೆ ನೋಡಿ : ಸಿಎಂ ಸಿದ್ದರಾಮಯ್ಯ ಟಾಂಗ್

ಬೆಂಗಳೂರು : ನೋಂದಣಿಯೇ ಆಗದ ಕಂಪನಿಗೆ550 ಎಕರೆ ಅರಣ್ಯ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿ, ಈಗ “ಸಹಿ ನನ್ನದಲ್ಲ, ಯಾರೋ ಪೋರ್ಜರಿ ಮಾಡಿದ್ದಾರೆ” ಎಂದು ಕಣ್ಣೀರು ಸುರಿಸುತ್ತಿರುವ ಕೇಂದ್ರ ಸಚಿವ ಹೆಚ್ .ಡಿ.ಕುಮಾರಸ್ವಾಮಿಯವರೇ, ನಿಮ್ಮ ಬ್ರಹ್ಮಾಂಡ ಭ್ರಷ್ಟಾಚಾರದ ಪುರಾಣದ ಮೊದಲ ಅಧ್ಯಾಯ ಪತ್ರಿಕೆಯಲ್ಲಿ ಪ್ರಕಟವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ನಿಮ್ಮ ಬ್ರಹ್ಮಾಂಡ ಭ್ರಷ್ಟಾಚಾರದ ಪುರಾಣದ ಮೊದಲ ಅಧ್ಯಾಯ ಪತ್ರಿಕೆಯಲ್ಲಿ ಪ್ರಕಟವಾಗಿದೆ, ಮುಂದೆ ಇನ್ನೇನೆಲ್ಲಾ ಬಹಿರಂಗವಾಗಲಿವೆಯೋ!!?? ಮುಡಾ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ನನ್ನ ಸಹಿ, ಟಿಪ್ಪಣಿ ಯಾವುದೂ ಇಲ್ಲ, ನನ್ನ ಅಧಿಕಾರವಧಿಯಲ್ಲಿ ನಡೆದದ್ದೇ ಅಲ್ಲ – ಹೀಗಿದ್ದರೂ ನನ್ನ ರಾಜೀನಾಮೆ ಕೇಳುತ್ತಿರುವ ಕುಮಾರಸ್ವಾಮಿಯವರೇ? ನಿಮ್ಮ ಊಟದೆಲೆಯಲ್ಲಿ ಆನೆ ಸತ್ತು ಬಿದ್ದಿದೆ ನೋಡಿ.

ನ್ಯಾ.ಎನ್.ಸಂತೋಷ್ ಹೆಗ್ಡೆ ನೇತೃತ್ವದ ಲೋಕಾಯುಕ್ತವೇ ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ಕೊಡುವುದೊಂದೇ ಬಾಕಿ. ಯಾರನ್ನು ಕಾಯುತ್ತಾ ಕೂತಿದ್ದೀರಿ? ನರೇಂದ್ರ ಮೋದಿಯವರು ಬಂದು ರಕ್ಷಿಸುತ್ತಾರೆಂದೇ? ಸ್ವಂತ ಪಕ್ಷದ ಮುಖ್ಯಮಂತ್ರಿಯನ್ನೇ ಜೈಲಿಗೆ ಕಳಿಸಿದ್ದ ಪಕ್ಷ ನಿಮ್ಮ ರಕ್ಷಣೆಗೆ ಬರುತ್ತಾರೆ ಎಂದು ಅಂದುಕೊಡಿದ್ದೀರಾ? ಯಾರೋ ಹೇಳಿದ ಕಾಗಕ್ಕ ಗುಬ್ಬಕ್ಕನ ಕಥೆ ಕೇಳಿ ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರೇ, ನಿಮ್ಮ ಕೈಯಲ್ಲಿರುವ ಹೆಚ್.ಡಿ.ಕುಮಾರಸ್ವಾಮಿಯವರ ಗಣಿ ಹಗರಣದ ದಾಖಲೆ ಪತ್ರಗಳು ಈಗ ಸಾರ್ವಜನಿಕರ ಮುಂದೆ ಇದೆ. ಇವುಗಳ ಒಂದು ಪ್ರತಿಯನ್ನು ನಿಮ್ಮ ಒಡೆಯರಿಗೆ ಕಳಿಸಿಕೊಡಿ, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದಂತೆ ಕೈಕಟ್ಟಿಹಾಕಿರುವ ಹಗ್ಗ ಬಿಚ್ಚಿಕೊಳ್ಳಬಹುದು ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

https://twitter.com/siddaramaiah/status/1826527591236268283

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read