ಚುನಾವಣಾ ಸೋಲಿನ ಆಘಾತದಿಂದ `HDK’ ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ : ಸಿಎಂ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು : ಚುನಾವಣಾ ಸೋಲಿನ ಆಘಾತದಿಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರೇ ಇತ್ತೀಚೆಗೆ ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸಿದರೆ ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ. ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ. ಇನ್ನು ನೀವು ಪ್ರಸ್ತಾಪಿಸಿರುವ ಶಾಸಕರ ಪತ್ರದ ನಕಲಿ-ಅಸಲಿ ವಿಚಾರ ಶೀಘ್ರದಲ್ಲಿಯೇ ತನಿಖೆಯಿಂದ ಹೊರಬೀಳಲಿದೆ.

https://twitter.com/siddaramaiah/status/1688887005395173377

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read