ಕುಂಭಮೇಳದಲ್ಲಿ ನಾಪತ್ತೆಯಾದವರ ಬಗ್ಗೆ ಮಾಹಿತಿ ಸಿಕ್ಕಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ ಬೆಳಗಾವಿಯ ನಾಲ್ವರು ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಏರ್ ಲಿಫ್ಟ್ ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಲ್ತುಳಿತ ದುರಂತದಲ್ಲಿ ಕೆಲವರು ನಾಪತ್ತೆಯಾಗಿದ್ದಾರೆ ಎಂಬ ಬಗ್ಗೆ ನಮಗೆ ಮಾಹಿತಿ ಸಿಕ್ಕಿಲ್ಲ. ಆದರೆ ನಾಲ್ವರು ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಏರ್ ಲಿಫ್ಟ್ ಮೂಲಕ ತರಲಾಗುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದರು.

ದುರಂತದಲ್ಲಿ ಮೃತಪಟ್ಟ ನಾಲ್ವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಗುವುದು. ಸರ್ಕಾರದ ವತಿಯಿಂದ ಜಿಲ್ಲಾಧಿಕಾರಿಗಳು ಅಥವಾ ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಘೋಷಿಸಲಿದ್ದಾರೆ ಎಂದು ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read