HomeEntertainmentಕುಂಭಮೇಳದ ವೈರಲ್ ಬೆಡಗಿ ಮೊನಾಲಿಸಾ ಮದುವೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪತಿ ವಿರುದ್ಧ ಪೋಕ್ಸೋ ಕೇಸ್...

ಕುಂಭಮೇಳದ ವೈರಲ್ ಬೆಡಗಿ ಮೊನಾಲಿಸಾ ಮದುವೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

ಮುಂಬೈ: ಕುಂಭಮೇಳದ ಸಂದರ್ಭದಲ್ಲಿ ಭಾರಿ ವೈರಲ್ ಆಗಿದ್ದ ರುದ್ರಾಕ್ಷಿ ಸುಂದರಿ ಮೊನಾಲಿಸಾ ಬೋಸ್ಲೆ ಬಾಲಿವುಡ್ ಹಾಗೂ ಮಾಲಿವುಡ್ ಸಿನಿಮಾಗಳಲ್ಲಿಯೂ ಅಭಿನಯಿಸಿ ಜನಪ್ರಿಯತೆ ಪಡೆದುಕೊಂಡಿದ್ದಾರೆ. ಇದೇ ವೇಳೆ ಮೊನಾಲಿಸಾ ನಟ ಫರ್ಮಾನ್ ಖಾನ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟುದ್ದು, ಇದೀಗ ಅವರ ಮದುವೆ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.

ಮೊನಾಲಿಸಾ ಭೋಸ್ಲೆ ವಿವಾಹ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ನಡೆಸಿದ ತನಿಖೆಯಲ್ಲಿ, ಮದುವೆಯ ವೇಳೆ ಮೊನಾಲಿಸಾ ಅಪ್ರಾಪ್ತ ಬಾಲಕಿ ಆಗಿದ್ದಳು ಎಂಬ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಇದರಿಂದಾಗಿ ಮೊನಾಲಿಸಾ ಪತಿ ಫರ್ಮಾನ್ ಖಾನ್ ವಿರುದ್ಧ ಕೇಸ್ ದಾಖಲಾಗಿದೆ. ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಕಾರಣಕ್ಕೆ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.

ಮೊನಾಲಿಸಾ ಹಾಗೂ ಫರ್ಮಾನ್ ಖಾನ್ ಮಾರ್ಚ್ 11ರಂದು ಕೇರಳದ ತಿರುವನಂತಪುರಂ ನ ಅರುಮನೂರು ನೈನಾರ್ ದೇವಾಲಯದಲ್ಲಿ ವಿವಾಹವಾಗಿದ್ದರು. ಈ ಮದುವೆಯ ನೋಂದಣಿಗಾಗಿ ಸಲ್ಲಿಸಲಾಗಿದ್ದ ಆಧಾರ್ ಕಾರ್ಡ್‌ನಲ್ಲಿ ಆಕೆಗೆ 18 ವರ್ಷ ಎಂದು ನಮೂದಿಸಲಾಗಿತ್ತು. ಆದರೆ, ಮಧ್ಯಪ್ರದೇಶದ ಮಹೇಶ್ವರದಲ್ಲಿರುವ ಸರ್ಕಾರಿ ಆಸ್ಪತ್ರೆಯ ದಾಖಲೆಗಳನ್ನು ಪರಿಶೀಲಿಸಿದಾಗ, ಮೊನಾಲಿಸಾ 2009ರ ಡಿಸೆಂಬರ್ 30ರಂದು ಜನಿಸಿರುವುದು ದೃಢಪಟ್ಟಿದೆ. ಇದರರ್ಥ ಮದುವೆಯ ಸಮಯದಲ್ಲಿ ಆಕೆಗೆ ಕೇವಲ 16 ವರ್ಷ 2 ತಿಂಗಳು ವಯಸ್ಸು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಕೆ ಅಪ್ರಾಪ್ತ ವಯಸ್ಕಳು ಎಂಬುದು ಸಾಬೀತಾದ ಬೆನ್ನಲ್ಲೇ, ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕಾಯ್ದೆ ಹಾಗೂ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮದುವೆಗಾಗಿ ನಕಲಿ ದಾಖಲೆಗಳನ್ನು ನೀಡಿದ ಆರೋಪದ ಮೇಲೆ ಕೇರಳದ ಸ್ಥಳೀಯ ಅಧಿಕಾರಿಗಳಿಗೂ ಆಯೋಗವು ಸಮನ್ಸ್ ಜಾರಿ ಮಡಿದೆ.

ಮೊನಾಲಿಸಾಳನ್ನು ಬಲವಂತವಾಗಿ ಮತಾಂತರಿಸಿ ಮದುವೆ ಮಾಡಲಾಗಿದೆ ಎಂದು ಆಕೆಯ ತಂದೆ ಜೈ ಸಿಂಗ್ ಭೋಸ್ಲೆ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಥಮ್ ದುಬೆ ಅವರು ಆಯೋಗಕ್ಕೆ ದೂರು ನೀಡಿದ್ದರು. ಆ ಬಳಿಕ ತನಿಖೆ ಆರಂಭಿಸಲಾಗಿತ್ತು. ಈಗ ತನಿಖೆಯ ವಿವರಗಳು ಲಭ್ಯವಾಗಿದ್ದು, ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಇದನ್ನು ಲವ್ ಜಿಹಾದ್ ಎಂದು ನಿರ್ದೇಶಕ ಸನೋಜ್ ಮಿಶ್ರಾ ಆರೋಪಿಸಿದ್ದಾರೆ.

ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಮಧ್ಯಪ್ರದೇಶ ಮತ್ತು ಕೇರಳದ ಪೊಲೀಸ್ ಮಹಾನಿರ್ದೇಶಕರಿಗೆ ವಿವರವಾದ ವರದಿ ಸಲ್ಲಿಸುವಂತೆ ಸೂಚಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular