HomeKarnatakaBREAKING: ಸ್ನೇಹಿತರ ಜೊತೆ ಈಜಲು ಹೋಗಿದ್ದ ಯುವಕ ನೀರುಪಾಲು

BREAKING: ಸ್ನೇಹಿತರ ಜೊತೆ ಈಜಲು ಹೋಗಿದ್ದ ಯುವಕ ನೀರುಪಾಲು

ಕಾರವಾರ: ಸ್ನೇಹಿತರ ಜೊತೆ ಈಜಲು ಹೋಗಿದ್ದ ಯುವಕ ವಾಲಗಳ್ಳಿ ಜಡ್ಡಿಕೆರೆಯಲ್ಲಿ ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ನಡೆದಿದೆ.

ಪ್ರಶಾಂತ್ ಕೇಶವ ಮುಕ್ರಿ (18) ಮೃತ ಯುವಕ. ಸ್ನೇಹಿತರ ಜೊತೆ ಜಡ್ದಿಕೆರೆಗೆ ಈಜಲೆಂದು ಹೋಗಿದ್ದ ವೇಳೆ ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ಬಂದು ೨ ಗಂಟೆಯಾದರೂ ಅಗ್ನಿಶಾಮಕ ಸಿಬ್ಬಂದಿ ಶವ ಮೇಲಕೆತ್ತದೇ ವಿಳಂಬ ಮಾಡುತ್ತಿತ್ತು. ಅಗ್ನಿಶಾಮಕ ದಳದ ಕಾರ್ಯಕ್ಕೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಆಗಮಿಸಿದ ಕುಮಟಾ ಪಿಎಸ್ಐ ಖಾದರ್ ಪಾಷಾ, ಸ್ವತಃ ಕೆರೆಗೆ ಹಾರಿ ಮೃತದೇಹವನ್ನು ಮೇಲೆ ತಂದಿದ್ದಾರೆ. ಪಿಎಸ್ಐ ಸಾಹಸಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕುಮಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular