HomeKarnatakaಒಬಿಸಿ ಪಟ್ಟಿಗೆ ಕುಂಚಿಟಿಗ ಸಮುದಾಯ: ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಣಯ

ಒಬಿಸಿ ಪಟ್ಟಿಗೆ ಕುಂಚಿಟಿಗ ಸಮುದಾಯ: ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಣಯ

ಬೆಂಗಳೂರು: ಕುಂಚಿಟಿಗ ಜಾತಿಯನ್ನು ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಜಾತಿ ಪಟ್ಟಿ -ಒಬಿಸಿಗೆ ಸೇರ್ಪಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ರಾತ್ರಿ ನಡೆದ ಸಂಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ತುಮಕೂರು, ಚಿತ್ರದುರ್ಗ ಮೊದಲಾದ ಜಿಲ್ಲೆಗಳಲ್ಲಿ ಬಹುಸಂಖ್ಯಾತ ಕುಂಚಿಟಿಗ ಸಮುದಾಯದ ಬಹುದಿನಗಳ ಬೇಡಿಕೆಗೆ ಸ್ಪಂದನೆ ಸಿಕ್ಕಂತಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಪುಟ ಸಭೆಯ ನಂತರ ಡಿಸಿಎಂ ಡಿ.ಕೆ. ಶಿವಕುಮಾರ್, ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು ಜಂಟಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಪ್ರಸ್ತುತ ರಾಜ್ಯದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಪ್ರವರ್ಗ 3(ಎ) ಅಡಿಯಲ್ಲಿ ಸೇರಿರುವ ಕುಂಚಿಟಿಗ ಸಮುದಾಯದ ಬಗ್ಗೆ ಡಿ. ದೇವರಾಜ ಅರಸು ಸಂಶೋಧನಾ ಸಂಸ್ಥೆ ಮೈಸೂರು ವಿಶ್ವವಿದ್ಯಾಲಯ ಸಹಯೋಗದಲ್ಲಿ ನಡೆಸಿದ ಕುಲಶಾಸ್ತ್ರೀಯ ಅಧ್ಯಯನದ ವರದಿ ಆಧರಿಸಿ ಕೇಂದ್ರ ಸರ್ಕಾರಕ್ಕೆ ಕುಂಚಿಟಿಗ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡಲು ಶಿಫಾರಸು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular