ಮೈಸೂರು: ಕುರ್ ಕುರೆ ಪ್ಯಾಕೇಟ್ ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ ಬಾಲಕ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಗೌರಿಪುರದಲ್ಲಿ ಈ ದುರಂತ ಸಂಭವಿಸಿದೆ. 5 ವರ್ಷದ ಮುಕುಂದ್ ಮಯೂರ್ ಮೃತ ಬಾಲಕ. ಹುಣಸೂರು ತಾಲೂಕಿನ ಗೌರಿಪುರ ಗ್ರಾಮದ ಸಂತೋಷ್ ಹಾಗೂ ಐಶ್ವರ್ಯಾ ದಂಪತಿಯ ಪುತ್ರ.
ಕುರ್ ಕುರೆ ಪ್ಯಾಕೇಟ್ ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ಗಂಟಲಲ್ಲಿ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

