ಬೆಳಗಾವಿ: ಕೆಲ ದಿನಗಳ ಹಿಂದೆ ಕುರಾನ್ ಪುಸ್ತಕ ಕಳ್ಳತನ ಮಾಡಿ ಸುಟ್ಟಿರುವ ಪ್ರಕರಣ ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ನಡೆದಿತ್ತು. ಘಟನೆ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಈ ಪ್ರಕರಣಲ್ಲಿ ಪೊಲೀಸರ ವೈಫಲ್ಯ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐಅವರನ್ನು ಸಸ್ಪೆಂಡ್ ಮಾಡಲಾಗಿದೆ.
ಸಿಪಿಐ ಮಂಜುನಾಥ ಹಿರೇಮಠ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕರ್ತವ್ಯ ಲೋಪ ಆರೋಪದಲ್ಲಿ ಮಂಜುನಾಥ್ ಅವರನ್ನು ಅಮಾನತು ಮಾಡಲಾಗಿದೆ.
ಈ ಬಗ್ಗೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾಹಿತಿ ನೀಡಿದ್ದು, ಕುರಾನ್ ಪುಸ್ತಕ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ ಮಂಜುನಾಥ ಹಿರೇಮಠರನ್ನು ಅಮಾನತು ಮಾಡಲಾಗಿದೆ. ಇವರು ಕರ್ತವ್ಯ ಲೋಪ ಎಸಗಿದ್ದರು ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಸಂತಿಬಸ್ತವಾಡ ಗ್ರಾಮದಲ್ಲಿ ಈದ್ಗಾ ಗೋಪುರ ಧ್ವಂಸ ಪ್ರಕರಣದಲ್ಲಿ ಆರೋಪಿ ಪತ್ತೆ ಹಚ್ಚುವಲ್ಲಿ ನಿರ್ಲಕ್ಷ್ಯ ವಹಿದ್ದರು ಈ ನಿಟ್ಟಿನಲ್ಲಿ ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.