ಆಂಧ್ರಪ್ರದೇಶ : ಕರ್ನೂಲ್ ಖಾಸಗಿ ಬಸ್ ಅಗ್ನಿ ದುರಂತದಲ್ಲಿ 20 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಚಾಲಕ ಲಕ್ಷ್ಮಯ್ಯ ಪಲ್ಯಾಡ್ ನಗರದ ನಿವಾಸಿ ಎಂದು ಗುರುತಿಸಲಾಗಿದೆ. ಈತ ನಕಲಿ ಅಂಕಪಟ್ಟಿ ನೀಡಿ ಡ್ರೈವಿಂಗ್ ಲೈಸೆನ್ಸ್ ಪಡೆದಿದ್ದನು ಎನ್ನಲಾಗಿದೆ. 10 ನೇ ತರಗತಿ ಪಾಸ್ ಆಗಿರೋ ನಕಲಿ ಅಂಕಪಟ್ಟಿ ಸಲ್ಲಿಸಿ ಡಿಎಲ್ ಪಡೆದಿದ್ದನು ಎಂಬ ವಿಚಾರ ತನಿಖೆಯಲ್ಲಿ ಬಯಲಾಗಿದೆ. ಬಸ್ ಚಾಲಕನನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕರ್ನೂಲ್ ಬಳಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ ಹೊತ್ತಿ ಉರಿದಿದ್ದು, 19 ಪ್ರಯಾಣಿಕರು ಸಜೀವದಹನವಾಗಿದ್ದರು. ಬೈಕ್ ಸವಾರ ಕೂಡ ಅಪಘಾತದಲ್ಲಿ ಮೃತಪಟ್ತಿದ್ದು ಒಟ್ಟು 20 ಜನರು ಸಾವನ್ನಪ್ಪಿದ್ದಾರೆ, 12 ಜನರು ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದುರಂತದಲ್ಲಿ ಮೃತಪಟ್ಟಿರುವ ಕುಟುಂಬಗಳಿಗೆ ಆಂಧ್ರಪ್ರದೇಶ ಸಾರಿಗೆ ಸಂಸ್ಥೆ ತಲಾ 5 ಲಕ್ಷ ಪರಿಹಾರ ಘೋಷಿಸಿದೆ.ಗಾಯಾಳುಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದೆ.
అంతా సెకన్ల వ్యవధిలోనే జరిగిపోయింది: ప్రయాణికుడు
— BIG TV Breaking News (@bigtvtelugu) October 24, 2025
కళ్లు తెరిచే లోపు భారీ మంటలు, పొగ
నాతో పాటు మరికొందరు ఎమర్జెన్సీ డోర్ బద్దలుకొట్టి బయటపడ్డాం
– ప్రయాణికుడు https://t.co/mohou6wJ5X pic.twitter.com/QadBVOcXTZ
