HomeKarnatakaರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್, ಮೊಬೈಲ್ ಬೆಟ್ಟಿಂಗ್ ಗೇಮ್ ನಿಷೇಧಿಸಲು ರೈತ ಸಂಘ ಆಗ್ರಹ

ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್, ಮೊಬೈಲ್ ಬೆಟ್ಟಿಂಗ್ ಗೇಮ್ ನಿಷೇಧಿಸಲು ರೈತ ಸಂಘ ಆಗ್ರಹ

ಬಳ್ಳಾರಿ: ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ಗೇಮ್, ಮೊಬೈಲ್ ಬೆಟ್ಟಿಂಗ್ ಗೇಮ್ ನಿಷೇಧಿಸುವಂತೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ.

ಬಳ್ಳಾರಿಯಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚಿನ ಹಣದ ಆಮಿಷಕ್ಕೆ ಒಳಗಾಗಿ ಯುವಕರು ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಆನ್ಲೈನ್ ಬೆಟ್ಟಿಂಗ್ ನಲ್ಲಿ ನೂರಾರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಆನ್ಲೈನ್ ಬೆಟ್ಟಿಂಗ್ ಅನ್ನು ತೆಲಂಗಾಣ, ತಮಿಳುನಾಡು ರಾಜ್ಯಗಳಲ್ಲಿ ನಿಷೇಧಿಸಲಾಗಿದೆ. ಅದೇ ರೀತಿ ಕರ್ನಾಟಕದಲ್ಲಿ ಆನ್ಲೈನ್ ಬೆಟ್ಟಿಂಗ್ ಗೇಮ್, ಮೊಬೈಲ್ ಬೆಟ್ಟಿಂಗ್ ಗೇಮ್ ಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular