HomeKarnatakaBIG NEWS: ಅಪಘಾತದಲ್ಲಿ ಗಾಯಗೊಂಡಿದ್ದ ರೈತ ಮುಖಂಡ ಕುರುಬೂರು ಶಾಂತಕುಮಾರ್ ಬೆಂಗಳೂರಿಗೆ ಏರ್ ಲಿಫ್ಟ್

BIG NEWS: ಅಪಘಾತದಲ್ಲಿ ಗಾಯಗೊಂಡಿದ್ದ ರೈತ ಮುಖಂಡ ಕುರುಬೂರು ಶಾಂತಕುಮಾರ್ ಬೆಂಗಳೂರಿಗೆ ಏರ್ ಲಿಫ್ಟ್

ಬೆಂಗಳೂರು: ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.‌

ಗಾಯಾಳು ಕುರುಬೂರು ಶಾಂತಕುಮಾರ್ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಾಂತಕುಮಾರ್ ಅವರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರೈಸಿದ್ದಾರೆ.

ಮೂರು ದಿನಗಳ ಹಿಂದೆ ಪಂಜಾಬ್ ನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ಶಾಂತಕುಮಾರ್ ಅವರು ಗಾಯಗೊಂಡು ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಷಯ ತಿಳಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರ್ ಆಂಬುಲೆನ್ಸ್ ಮೂಲಕ ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಬ್ಬರು ಸಹಾಯಕರು ಹಾಗೂ ವೈದ್ಯರ ತಂಡದೊಂದಿಗೆ ಇಂದು ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular