HomeIndiaBREAKING NEWS: ಪಂಜಾಬ್ ನ ಪಟಿಯಾಲದಲ್ಲಿ ಭೀಕರ ಅಪಘಾತ: ರೈತ ಮುಖಂಡ ಕುರುಬೂರು ಶಾಂತಕುಮಾರ್ ಗೆ...

BREAKING NEWS: ಪಂಜಾಬ್ ನ ಪಟಿಯಾಲದಲ್ಲಿ ಭೀಕರ ಅಪಘಾತ: ರೈತ ಮುಖಂಡ ಕುರುಬೂರು ಶಾಂತಕುಮಾರ್ ಗೆ ಗಂಭೀರ ಗಾಯ

ನವದೆಹಲಿ: ರೈತ ಮುಖಂಡ ಕುರುಬೂರು ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಶಾಂತಕುಮಾರ್ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಂಜಾಬ್ ನ ಪಟಿಯಾಲ ಬಳಿ ನಡೆದಿದೆ.

ದೆಹಲಿಹಲಿಯ ಕನೋಲಿ ಬಾರ್ಡರ್ ನಲ್ಲಿ ಕಳೆದ ಒಂದು ವರ್ಷದಿಂದ ರೈತ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದು, ಇಂದು ಮಹತ್ವದ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ತೆರಳುತ್ತಿದ್ದರು.

ಕುರುಬೂರು ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ಪಂಜಾಬ್ ನ ಪಟಿಯಾಲ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕುರುಬೂರು ಶಾಂತಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ.  ಅವರ ಜೊತೆ ಕಾರಿನಲ್ಲಿದ್ದ ತಮಿಳುನಾಡಿನ ರೈತ ಮುಖಂಡ ಪಾಂಡಿಯನ್ ಎಂಬುವವರಿಗೂ ಗಾಯಗಳಾಗಿವೆ. ಸ್ಥಳೀಯರ ಸಾಹಾಯದಿಂದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular